ಸಂಘ-ಸಂಸ್ಥೆಗಳಿಂದ ಪ್ರತಿಭೆ ಅನಾವರಣ

Ksd_Associations
Published on

ಕಾಸರಗೋಡು: ಹೆಣ್ಣು ಮಕ್ಕಳ ಪ್ರತಿಭೆಯನ್ನು ಸಂಘ-ಸಂಸ್ಥೆಗಳು ಅನಾವರಣಗೊಳಿಸಬೇಕು ಎಂದು ರಂಗನಟಿ ರೂಪಶ್ರೀ ವರ್ಕಾಡಿ ಹೇಳಿದರು.
ರಂಗಚಿನ್ನಾರಿಯ ಅಂಗ ಸಂಸ್ಥೆ ನಾರಿ ಚಿನ್ನಾರಿ ವತಿಯಿಂದ, ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ದಸರಾ ಅಂಗವಾಗಿ ಕಾಸರಗೋಡಿನಲ್ಲಿ ಇತ್ತೀಚೆಗೆ ಆಯೋಜಿಸಲಾದ ‘ನವ ವನಿತಾ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾರಿ ಚಿನ್ನಾರಿ ಕಾರ್ಯಾಧ್ಯಕ್ಷೆ ಸವಿತಾ ಅಧ್ಯಕ್ಷತೆ ವಹಿಸಿದ್ದರು. ಕಲಾವಿದೆ ಸುಶೀಲ ಮಾಧವ ಆಚಾರ್ಯ ಅವರನ್ನು ಸನ್ಮ್ಮಾನಿಸಲಾಯಿತು. ವೈದ್ಯ ಡಾ.ಬಿ.ಎಸ್.ರಾವ್ ಅವರನ್ನು ಗೌರವಿಸಲಾಯಿತು.ಗೌರವಾಧ್ಯಕ್ಷೆ ತಾರಾ ಪ್ರಸಾದ್ ಉಪಸ್ಥಿತರಿದ್ದರು.

ಡಾ.ರೇಖಾ ಮಯ್ಯ ಮುಖ್ಯ ಅತಿಥಿಯಾಗಿದ್ದರು. ರಂಗ ಚಿನ್ನಾರಿ ಸಂಚಾಲಕ ಕಾಸರಗೋಡು ಚಿನ್ನಾ ಸಮಾರೋಪ ಮಾತುಗಳನ್ನಾಡಿದರು. ನಿರ್ದೇಶಕರಾದ ಕೆ.ಸತ್ಯನಾರಾಯಣ, ಕೆ.ಸತೀಶ್ಚಂದ್ರ ಭಂಡಾರಿ, ಮನೋಹರ ಶೆಟ್ಟಿ ಉಪಸ್ಥಿತರಿದ್ದರು. ವಿಜಯಲಕ್ಷ್ಮೀ ಶ್ಯಾನುಭೋಗ್ ಸ್ವಾಗತಿಸಿದರು. ನಾರಿ ಚಿನ್ನಾರಿ ಕಾರ್ಯದರ್ಶಿ ದಿವ್ಯಾ ಗಟ್ಟಿ ಪರಕ್ಕಿಲ ಕಾರ್ಯಕ್ರಮ ನಿರೂಪಿಸಿದರು. ಸರ್ವಮಂಗಳ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net