ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅವಶ್ಯ :ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಮತ

scdcc
ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಡಾ.ಯು.ಕೆ.ಮೋನು, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಉಪಸ್ಥಿತರಿದ್ದರು
Published on

ವಿಜಯವಾಣಿ ಸುದ್ದಿಜಾಲ ಮಂಗಳೂರು

ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಹೆಚ್ಚಿನ ಪ್ರೋತ್ಸಾಹ ನೀಡುವುದರಿಂದ ಅವರ ಭವಿಷ್ಯ ಉಜ್ವಲವಾಗಲಿದೆ. ಈ ನಿಟ್ಟಿನಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕಳೆದ 16 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿ ಮಕ್ಕಳ ಕಲಿಕೆಗೆ ಉತ್ತೇಜನ ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ಸಿಡಿಸಿಸಿ) ವತಿಯಿಂದ ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಶನಿವಾರ ಬ್ಯಾಂಕಿನ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಅವಿಭಜಿತ ದ.ಕ.ಜಿಲ್ಲೆಯ ಸವಾರ್ಂಗೀಣ ಪ್ರಗತಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ದ.ಕ.ಜಿಲ್ಲೆಯ 4 ವೈದ್ಯಕೀಯ ಕಾಲೇಜುಗಳಿಗೆ ಬ್ಯಾಂಕ್‌ನಿಂದ ಸಾಲ ಸೌಲಭ್ಯ ಒದಗಿಸಲಾಗಿದ್ದು, ಕ್ಲಪ್ತ ಸಮಯಕ್ಕೆ ಕಂತು ಮರು ಪಾವತಿಯಾಗುತ್ತಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದರು.

ವಿದ್ಯಾರ್ಥಿ ವೇತನ ವಿತರಣೆ

2023-2024ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಯ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಡಾ.ಎಂಎನ್‌ಆರ್ ದಕ್ಷ ಸಾರಥ್ಯ

ಪ್ರತಿಭಾ ಪುರಸ್ಕಾರ ನೆರವೇರಿಸಿದ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧ್ಯಕ್ಷ ಡಾ.ಯು.ಕೆ.ಮೋನು ಮಾತನಾಡಿ, ಸ್ವಾತಂತ್ರದ ಬಳಿಕ ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ಕಾರಣ ದೇಶ ಇಂದು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಹಿಂದೆ ಸೌಲಭ್ಯದ ಕೊರತೆಯಿಂದಾಗಿ ಹೆಚ್ಚಿನವರು ಶಿಕ್ಷಣದಿಂದ ವಂಚಿತರಾಗಿದ್ದರು. ಈಗಿನ ಮಕ್ಕಳಿಗೆ ಶಿಕ್ಷಣಕ್ಕೆ ಬೇಕಾದ ಎಲ್ಲ ರೀತಿಯ ಸೌಲಭ್ಯಗಳಿದ್ದು ಅದೃಷ್ಟವಂತರಾಗಿದ್ದಾರೆ. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ದಕ್ಷ ಸಾರಥ್ಯದಲ್ಲಿ ಇಂದು ದೇಶದಲ್ಲೇ ಗುರುತಿಸಿಕೊಂಡಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಮಕ್ಕಳ ಶಿಕ್ಷಣಕ್ಕೂ ನೆರವು ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ.ಎಸ್.ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ, ಎಸ್.ರಾಜು ಪೂಜಾರಿ, ಎಸ್.ಬಿ.ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕ್ ಕುಮಾರ್ ಶೆಟ್ಟಿ , ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಸದಾಶಿವ ಉಳ್ಳಾಲ್, ಸ್ಕಾೃಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಉಪಸ್ಥಿತರಿದ್ದರು. ನಿರ್ದೇಶಕ ಶಶಿಕುಮಾರ್ ರೈ. ಬಾಲ್ಯೊಟ್ಟು ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net