ಪ್ರತಿಭೆಗಳಿಗೆ ಸಿಗಲಿವೆ ಅವಕಾಶ

h18-mahesh college
Published on

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಪ್ರಿಯದರ್ಶಿನಿ ಕಾಲನಿಯಲ್ಲಿರುವ ಎನ್​ಎಲ್​ಇ ಸೊಸೈಟಿಯ ಡಾ. ಆರ್.ಬಿ. ಪಾಟೀಲ್ ಮಹೇಶ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮ ‘ವಾರೀಧಿ-3.0’ ಅನ್ನು ಶನಿವಾರ ಏರ್ಪಡಿಸಲಾಗಿತ್ತು.

ದೇಶಪಾಂಡೆ ಫೌಂಡೇಷನ್ ಕೌಶಲ ಅಭಿವೃದ್ಧಿ ತರಬೇತಿ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಎನ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಗತ್ತಿನ ಮೂರನೇ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುತ್ತಿದೆ. ಪ್ರತಿಭೆಯುಳ್ಳವರಿಗೆ ಒಳ್ಳೆಯ ಅವಕಾಶಗಳಿವೆ. ವಿದ್ಯಾರ್ಥಿಗಳು ನಿರ್ಮಾಣ ಕೌಶಲ ಜತೆಗೆ ನಿರ್ವಹಣಾ ಕೌಶಲ ಬೆಳೆಸಿಕೊಳ್ಳಬೇಕು ಎಂದರು.

ಎನ್.ಎಲ್.ಇ. ಸೊಸೈಟಿ ಚೇರ್ಮನ್ ಡಾ. ಪಿ.ವಿ. ದತ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಯಶಸ್ಸಿಗಾಗಿ ಪ್ರಯತ್ನ ಪಡಬೇಕು. ದಾರಿ ತೋರಿದವರನ್ನು ಸ್ಮರಿಸಬೇಕು. ಜ್ಞಾನ, ಕೌಶಲ ಮೈಗೂಡಿಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ರಾಮಮೋಹನ್ ಎಚ್.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಹುಬ್ಬಳ್ಳಿ ಶಹರ ಹಾಗೂ ಸುತ್ತಮುತ್ತಲಿನ 30ಕ್ಕೂ ಹೆಚ್ಚಿನ ಶಾಲೆಗಳಿಂದ 300ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.

ಚಂದ್ರಯಾನದ ಲ್ಯಾಂಡರ್ ಮಾದರಿಯಲ್ಲಿ ಆಗಸದಿಂದ ವೀರಾಗ್ರಣಿ ಪ್ರಶಸ್ತಿ ಕಪ್ ಕೆಳಗೆ ಇಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಉಪಪ್ರಾಂಶುಪಾಲ ರಮೇಶ ಹೊಂಬಾಳೆ, ಸಾಂಸ್ಕೃತಿಕ ಕಾರ್ಯಕ್ರಮಗಳ ವಿಭಾಗದ ಮುಖ್ಯಸ್ಥ ನೀಲ್ ಪ್ರತಾಪನ್, ಕುಬೇರ ಶಿರಾಲಕರ್, ಐ.ಎಸ್. ಹಿರೇಮಠ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net