ವರಿಷ್ಠರ ಜತೆಗಿನ ಮಾತುಕತೆ ಮುಕ್ತಾಯ: ಈಶ್ವರಪ್ಪ

EX DCM K.S.Eshwarappa
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ಬಿಜೆಪಿ ವರಿಷ್ಠರ ಜತೆ ನನ್ನ ಮಾತುಕತೆ ಮುಗಿದಿದೆ. ಇನ್ನು ಯಾರ ಜತೆಗೂ ಮಾತುಕತೆಗೆ ಕೂರುವುದಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

ನನ್ನನ್ನು ಇನ್ನೂ ಪಕ್ಷದಿಂದ ಯಾಕೆ ಉಚ್ಚಾಟಿಸಿಲ್ಲ ಎಂದು ನನಗೆ ಗೊತ್ತಾಗುತ್ತಿಲ್ಲ. ಉಚ್ಚಾಟಿಸಿದರೆ ಮತ್ತಷ್ಟು ಕಟುವಾಗಿ ಮಾತನಾಡಲು ಸಾಧ್ಯವಾಗಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪಕ್ಷದೊಳಗಿರುವ ಇನ್ನೂ ಅನೇಕ ನಾಯಕರಿಗೆ ತೀವ್ರ ಅಸಮಾಧಾನ ಇದೆ. ಕಾಲಕಾಲಕ್ಕೆ ಅದನ್ನು ಹೊರಹಾಕಿದ್ದಾರೆ. ನಾನು ಧೈರ್ಯವಾಗಿ ಪಕ್ಷದಿಂದ ಹೊರಬಂದು ಪಕ್ಷ ಶುದ್ಧೀಕರಣದ ಹೋರಾಟ ನಡೆಸಿದ್ದೇನೆ. ಅವರು ಒಳಗಿದ್ದುಕೊಂಡೇ ಹೋರಾಟ ನಡೆಸುತ್ತಿದ್ದಾರೆ ಎಂದರು.
ಏ.12ರಂದು ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಮುನ್ನ ಬೆಳಗ್ಗೆ 10ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಸಾವಿರಾರು ಸಂಖ್ಯೆಯಲ್ಲಿ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಗಾಂಧಿಬಜಾರ್, ನೆಹರು ರಸ್ತೆಯ ಮೂಲಕ ಶೀನಪ್ಪ ಶೆಟ್ಟಿ ವೃತ್ತ ವೃತ್ತಕ್ಕೆ ಬರಲಾಗುವುದು. ಅಲ್ಲಿ ಸಭೆ ನಡೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net