ತಲ್ಲೂರು ಸರ್ಕಾರಿ ಶಾಲೆ ಆರಂಭೋತ್ಸವ

gan (10)
Published on

ಕುಂದಾಪುರ: ತಲ್ಲೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗದ ಒಂದನೇ ತರಗತಿ ಉದ್ಘಾಟನೆ ಮತ್ತು ಪ್ರಾರಂಭೋತ್ಸವ ಇತ್ತೀಚೆಗೆ ಜರುಗಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್ ಎಸ್.ನಾಯ್ಕ ಮತ್ತು ಹಳೇ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ನಾರಾಯಣ ಶೆಟ್ಟಿ ಉದ್ಘಾಟಿಸಿದರು.

ಎಸ್‌ಡಿಎಂಸಿ ಅಧ್ಯಕ್ಷ ಪ್ರಶಾಂತ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಉದಯ್‌ಕುಮಾರ್ ತಲ್ಲೂರು ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ರಮೇಶ್ ಆಚಾರಿ ಕೋಟೆಬಾಗಿಲು ಅವರು ವತಿಯಿಂದ ಕೊಡುಗೆ ನೀಡಲಾದ ಐಡಿಕಾರ್ಡ್ ಹಾಗೂ ಬೆಲ್ಟ್ ವಿತರಿಸಲಾಯಿತು. ಬಳಿಕ ಎಲ್‌ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣ ಪೂಜಾರಿ ತಲ್ಲೂರು, ತಲ್ಲೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ರವಿಚಂದ್ರ, ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ಯಾಮಲಾ ಭಂಡಾರಿ, ತಲ್ಲೂರು ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಅಸ್ಲಂ ಉಪಸ್ಥಿತರಿದ್ದರು. ರತ್ನಾ ಪೂಜಾರಿ ಸ್ವಾಗತಿಸಿದರು. ಚಂದ್ರ ಎಂ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net