ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಪ್ರದಾನ

udp-3-talluru
Published on

ಉಡುಪಿ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದ ಸಂಸ ಬಯಲು ರಂಗಮಂದಿರದಲ್ಲಿ ನಡೆದ ಕೆಂಪೇಗೌಡ ಕರ್ನಾಟಕ ಪ್ರಾದೇಶಿಕ ಸಾಂಸ್ಕತಿಕ ಕಲಾ ಉತ್ಸವದ ಸಂದರ್ಭದಲ್ಲಿ ಭಾರತರತ್ನ ಸರ್​. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್​ ಪ್ರತಿಷ್ಠ್ಠಾನ ಟ್ರಸ್ಟ್​ ವತಿಯಿಂದ ಸಮಗ್ರ ಸಾಹಿತ್ಯ ಸೇವೆ ಮತ್ತು ಜೀವಮಾನ ಸಾಧನೆಗಾಗಿ ಕೊಡಮಾಡುವ ಪ್ರತಿಷ್ಠಿತ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯನ್ನು ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಲೇಖಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಶನಿವಾರ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್​ ಅಧ್ಯಕ್ಷ ರಮೇಶ್​ ಸುರ್ವೆ, ಗೌರವಾಧ್ಯಕ್ಷ ರಮೇಶ್​ ಎನ್​.ಅಂಗಡಿ, ಬೆಳಗಾವಿ ಚಿಪ್ಪಲಕಟ್ಟಿ ಹಿರೇಮಠದ ಡಾ.ಕಲ್ಮೇಶ್ವರ ಸ್ವಾಮಿ, ಬೆಂಗಳೂರು ವನಕಲ್ಲು ಮಲ್ಲೇಶ್ವರ ಸುಕ್ಷೇತ್ರದ ಡಾ.ಬಸವರಮಾನಂದ ಮಹಾಸ್ವಾಮಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ್​ ಕುಮಾರ್​ ಎಸ್​.ಹೊಸಮನಿ, ನಟಿ ಮೀನಾ, ನಟ ಶಂಕರ ಭಟ್​, ಸಾಹಿತಿ ಡಾ,ಮಹಂತೇಶ ಮಲ್ಲನಗೌಡರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net