ಲಂಚ ಪಡೆದ ವಿಡಿಯೋ ವೈರಲ್, ತಾಲೂಕು ಆರೋಗ್ಯಾಧಿಕಾರಿ ಅಮಾನತ್

11-2.jpg
Published on

ಗುಡಿಬಂಡೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಶಸ್ತçಚಿಕಿತ್ಯಕ ಹಾಗೂ ಪ್ರಭಾರಿ ತಾಲೂಕು ಆರೋಗ್ಯಾಧಿಕಾರಿಯು ರೋಗಿಗಳಿಂದ ಲಂಚ ಪಡೆದು, ಅಮಾನತ್‌ಗೊಂಡಿದ್ದಾರೆ.
ಆರೋಪಿ ವೈದ್ಯ ಡಿ.ಆರ್.ನರಸಿಂಹಮೂರ್ತಿ. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಲಂಚ ಪಡೆಯುತ್ತಿದ್ದ ಆರೋಪದಡಿಯಲ್ಲಿ ಶಿಸ್ತು ಪ್ರಾಧಿಕಾರ ಹಾಗೂ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಕೆ.ಬಿ.ಶಿವಕುಮಾರ್ ಅಮಾನತ್ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತçಚಿಕಿತ್ಸೆ ಮಾಡಿಸಿಕೊಳ್ಳುತ್ತಿದ್ದ ಬಡ ರೋಗಿಯಿಂದ ಲಂಚ ಪಡೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರ ಬಗ್ಗೆ ತನಿಖೆ ನಡೆಸಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್‌ಕುಮಾರ್ ವರದಿ ನೀಡಿದ್ದು ಇದನ್ನಾಧಾರಿಸಿ ಅಮಾನತ್‌ಗೊಳಿಸಲಾಗಿದೆ. ಹಾಗೆಯೇ ದಕ್ಷಿಣ ಕನ್ನಡಜಿಲ್ಲೆಯ ಪುತ್ತೂರುನಲ್ಲಿ ಖಾಲಿ ಇರುವ ಹುದ್ದೆಗೆ ಹಲವು ಷರತ್ತುಗಳೊಂದಿಗೆ ವರ್ಗಾವಣೆಗೊಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net