ಸಕಾಲಕ್ಕೆ ಚಿಕಿತ್ಸೆ ಪಡೆದರೆ ಆರೋಗ್ಯ ರಕ್ಷಣೆ

dj sirigere health
Published on

ಸಿರಿಗೆರೆ: ಕಾಲಕಾಲಕ್ಕೆ ಗರ್ಭಿಣಿಯರು ತಪಾಸಣೆ ಮಾಡಿಸಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದಲ್ಲಿ ವೈಯಕ್ತಿಕ ಜತೆಗೆ ಆರೋಗ್ಯವಂತ ಮಗು ಪಡೆಯಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.

ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸುರಕ್ಷಿತ ಮಾತೃತ್ವ’ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಗರ್ಭಿಣಿಯರಿಗೆ ಮಾಹಿತಿ ಕೊರತೆ ಹಿನ್ನೆಲೆಯಲ್ಲಿ ಹೆಚ್ಚಿನ ಅವಘಡಗಳು ಸಂಭವಿಸುತ್ತಿವೆ. ಹೀಗಾಗಿ ವೈದ್ಯರಿಂದ ಸೂಕ್ತ ಸಲಹೆಗಳನ್ನು ಪಡೆಯಬೇಕು ಎಂದರು.

ಆಡಳಿತ ವೈದ್ಯಾಧಿಕಾರಿ ಹಾಗೂ ಮಕ್ಕಳ ತಜ್ಞ ಡಾ.ತಿಮ್ಮೇಗೌಡ ಮಾತನಾಡಿ, ಸರ್ಕಾರದ ಯೋಜನೆಗಳು ಗ್ರಾಮಾಂತರ ಪ್ರದೇಶದ ಹೆಣ್ಣು ಮಕ್ಕಳಿಗೂ ತಲುಪಿಸುವ ನಿಟ್ಟಿನಲ್ಲಿ ಜನನಿ ಸುರಕ್ಷಾ ಯೋಜನೆ, ಜೆಎಸ್‌ಎಸ್‌ಕೆ ಇವು ಸರ್ಕಾರದ ಉಪಯುಕ್ತ ಯೋಜನೆಗಳಾಗಿವೆ.

ಗರ್ಭಿಣಿಯರು ಪ್ರತಿ ತಿಂಗಳು 9 ರಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೊಳಪಟ್ಟು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞೆ ಡಾ.ಪವಿತ್ರಾ, ಡಾ.ತುಳಸೀರಂಗನಾಥ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಮೋಹನಕುಮಾರ್, ನರ್ಸ್ ತಾರಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net