ಜ.21, 22ಕ್ಕೆ ತಾಲೂಕು ಕಸಾಪ ಸಮ್ಮೇಳನ

kannada
ತಾಲೂಕು ಕಸಾಪ ಸಮ್ಮೇಳನ
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ.
ತಾಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜ.21 ಮತ್ತು 22ರಂದು ಆಯೋಜಿಸಿರುವ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆದ ವೈದ್ಯ ಡಾ.ಟಿ.ಎಚ್.ಆಂಜನಪ್ಪ ಆಯ್ಕೆಯಾಗಿದ್ದಾರೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಧೀರಜ್ ಮುನಿರಾಜು ತಿಳಿಸಿದರು. ಸಮ್ಮೇಳನವು ಎರಡು ದಿನಗಳ ಕಾಲ ನಡೆಯಲಿದ್ದು, ಜ.21 ರಂದು ನಾಡ ಧ್ವಜಾರೋಹಣ, ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಸಮ್ಮೇಳನ ಉದ್ಘಾಟನೆ, ವಿಚಾರಗೋಷ್ಠಿ, ಯುವಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಇನ್ನು ಜ.22ಕ್ಕೆ ಮಕ್ಕಳ ಗೋಷ್ಠಿ, ಮಹಿಳಾಗೋಷ್ಠಿ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಮಾರೋಪ ನಡೆಯಲಿದೆ ಎಂದು ಮಂಗಳವಾರ ಬಾಶೆಟ್ಟಿಹಳ್ಳಿ ಪಪಂ ಸಂಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಾಶೆಟ್ಟಿಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ ಮಾತನಾಡಿ, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿರುವುದು ಉತ್ತಮ ಬೆಳವಣಿಗೆ. ಸ್ಥಳೀಯರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಮ್ಮೇಳನ ಯಶಸ್ಸಿಗೆ ಶ್ರಮಿಸಬೇಕು ಎಂದರು.

ಸಮ್ಮೇಳನ ಅಧ್ಯಕ್ಷರ ಪರಿಚಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರಿನ ಹನುಮಂತರಾಯಪ್ಪ ಮತ್ತು ಲಕ್ಷ್ಮೀದೇವಮ್ಮ ದಂಪತಿ ಮಗನಾದ ಡಾ.ಟಿ.ಎಚ್.ಆಂಜನಪ್ಪ ಅವರು, ಸ್ವಗ್ರಾಮ ದೊಡ್ಡತುಮಕೂರಿನಲ್ಲಿ ಪ್ರಾಥಮಿಕ ಶಿಕ್ಷಣವನ್ನು, ದೊಡ್ಡಬಳ್ಳಾಪುರದಲ್ಲಿ ಪ್ರೌಢಶಿಕ್ಷಣ, ಬೆಂಗಳೂರಿನಲ್ಲಿ ಪದವಿಪೂರ್ವ, ಬಳ್ಳಾರಿ ಮತ್ತು ಹುಬ್ಬಳ್ಳಿಯಲ್ಲಿ ವೈದ್ಯಕೀಯ ಶಿಕ್ಷಣ ಪಡೆದಿದ್ದು, ಪ್ರತಿಷ್ಠಿತ ಆಸ್ಪತ್ರೆ ಮತ್ತು ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಸೇವೆ ಸಲ್ಲಿಸಿಸುವ ಜತೆಗೆ ದೂರದರ್ಶನ ವಾಹಿನಿಗಳು ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಕನ್ನಡ ಭಾಷೆಯಲ್ಲಿಯೇ ಜನಸಾಮಾನ್ಯರಿಗೆ ಆರೋಗ್ಯ ಕಾಳಜಿ ಮತ್ತು ಜಾಗೃತಿ ಮೂಡಿಸುವಲ್ಲಿ ನಿರತರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net