ಸಮುದಾಯ ಭವನ ಸ್ವಾಭಿಮಾನದ ಸಂಕೇತ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ

New Project (4)
Published on

ವಿಜಯವಾಣಿ ಸುದ್ದಿಜಾಲ ಕಡಬ

ಸಮುದಾಯ ಭವನ ಸಮಾಜದ ಸ್ವಾಭಿಮಾನದ ಸಂಕೇತ. ಈ ನಿಟ್ಟಿನಲ್ಲಿ ಸಮಾಜ ಬಾಂಧವರ ಶ್ರಮ, ಶ್ರದ್ಧೆ, ಭಕ್ತಿ ಮೆಚ್ಚುವಂತದ್ದು. ಮನೆ ಭೇಟಿ ಸೇರಿದಂತೆ ಹಾಕಿಕೊಂಡಿರುವ ಯೋಜನೆಗಳು ಸಮಾಜಕ್ಕೆ ಮಾದರಿ ಎಂದು ಆದಿಚುಂಚನಗಿರಿ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಒಕ್ಕಲಿಗ ಗೌಡ ಸೇವಾ ಸಂಘ ಕಡಬ ತಾಲೂಕು ವತಿಯಿಂದ ತಾಲೂಕು ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಕಡಬ ಹೊಸಮಠದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಸಮುದಾಯ ಭವನದಲ್ಲಿ ಸಂಘದ ಆಡಳಿತ ಕಚೇರಿ ಉದ್ಘಾಟಿಸಿ ಆಶೀರ್ವಚನ ನೀಡಿದರು.

ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಕುಮಾರ್ ಕಡಬ ತಾಲೂಕು ಒಕ್ಕಲಿಗ ಗೌಡ ಸ್ವಸಹಾಯ ಸಂಘಗಳ ಲಾಂಛನ ಅನಾವರಣಗೊಳಿಸಿದರು.ಉದ್ಯಮಿ ಪ್ರದೀಪ್ ಆರ್.ಗೌಡ ಅರುವ ಗುತ್ತು, ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಅಧ್ಯಕ್ಷ ಕೇಶವ ಅಮೈ ಶುಭಹಾರೈಸಿದರು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಸುಳ್ಯ ತಾಲೂಕು ಅಧ್ಯಕ್ಷ ಪಿ.ಎಸ್.ಗಂಗಾಧರ ಗೌಡ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಗೋಪಾಲಕೃಷ್ಣ ಗೌಡ ಪೂಯಿಲ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಂಜೋಡಿ, ಸಂಘಟನಾ ಕಾರ್ಯದರ್ಶಿ ಶಿವರಾಮ ಗೌಡ ಏನೆಕಲ್ಲು, ಯುವ ಸಂಘದ ಅಧ್ಯಕ್ಷ ಪೂರ್ಣೇಶ್ ಗೌಡ ಬಲ್ಯ, ಮಹಿಳಾ ಸಂಘದ ಅಧ್ಯಕ್ಷೆ ವೀಣಾ ರಮೇಶ್ ಕೊಲ್ಲೆಸಾಗು, ಕಾರ್ಯದರ್ಶಿ ಲಾವಣ್ಯ ಮಂಡೆಕರ ಉಪಸ್ಥಿತರಿದ್ದರು.

ನೇಗಿಲ ಯೋಗಿ ಹಾಗೂ ನೇಗಿಲು ಸ್ವಸಹಾಯ ಸಂಘ ಉದ್ಘಾಟನೆಗೊಂಡಿತು.

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸ್ಪಂದನಾ ಸಮುದಾಯ ಸಹಕಾರ ಸಂಘದ ನಿರ್ದೇಶಕ ಹಿರಿಯಣ್ಣ ಗೌಡ ಹೆಸರು ವಾಚಿಸಿದರು.

ಸಮುದಾಯ ಭವನದ ವ್ಯವಸ್ಥಾಪಕ ಅಶೋಕ್ ಶೇಡಿ ಸ್ವಾಗತಿಸಿ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಉಪಾಧ್ಯಕ್ಷ ತಮ್ಮಯ್ಯ ಗೌಡ ವಂದಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ನಿರೂಪಿಸಿದರು.

ಬೆಳಗ್ಗೆ ನಾಗತಂಬಿಲ ಹಾಗೂ ನೂತನ ಆಡಳಿತ ಕಚೇರಿಯಲ್ಲಿ ಗಣಹೋಮ ನಡೆಯಿತು. ಬಳಿಕ ಸಂಘದ ಗೌರವಾಧ್ಯಕ್ಷ ಗೋಪಾಲಕೃಷ್ಣ ಗೌಡ ಪೂಯಿಲ ಧ್ವಜಾರೋಹಣ ನೆರವೇರಿಸಿದರು. ಕುಂತೂರು ವಲಯ ಉಪ ವಲಯ ಅರಣ್ಯಾಧಿಕಾರಿ ಜಯಕುಮಾರ್ ಸಣ್ಣಾರ ಕ್ರೀಡಾಕೂಟ ಉದ್ಘಾಟಿಸಿದರು. ಸಂಜೆ ಸಮಾರೋಪ ಸಮಾರಂಭ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net