ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಾಳೆ

dasara sports
Published on

ಸವಣೂರ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯಿತಿ, ಸ್ಥಳೀಯ ಅಮೆಚ್ಯೂರ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಸೆ. 16 ರಂದು ಬೆಳಗ್ಗೆ 10ಕ್ಕೆ 2023-24ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಏರ್ಪಡಿಸಲಾಗಿದೆ. ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ದೊಡ್ಡಹುಣಸೆ ಕಲ್ಮಠದ ಶ್ರೀ ಚನ್ನಬಸವ ಸ್ವಾಮೀಜಿ ಆಶೀರ್ವಚನ ನೀಡುವರು.


ಕ್ರೀಡಾಕೂಟದ ಸ್ಪರ್ಧೆಗಳು: (ಪುರುಷರಿಗೆ)ಅಥ್ಲೆಟಿಕ್ಸ್, ವಾಲಿಬಾಲ್, ಥ್ರೋಬಾಲ್, ಕಬಡ್ಡಿ, ಖೋ-ಖೋ, ಯೋಗ.
ಅಥ್ಲೆಟಿಕ್ಸ್: 100 ಮೀ, 200 ಮೀ, 400 ಮೀ, 800 ಮೀ, 5000 ಮೀ ಹಾಗೂ 10000 ಮೀ ಓಟ.
ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲೀನ್​ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4100 ಮೀ ರಿಲೇ, 4400ಮೀ ರಿಲೇ.


ಮಹಿಳೆಯರಿಗೆ: ಅಥ್ಲೆಟಿಕ್ಸ್, ವಾಲಿಬಾಲ್, ಥ್ರೋಬಾಲ್, ಕಬಡ್ಡಿ, ಖೋ-ಖೋ,
ಅಥ್ಲೆಟಿಕ್ಸ್: 100 ಮೀ, 200 ಮೀ, 400 ಮೀ, 800 ಮೀ, 3000 ಮೀ ಓಟ.
ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲೀನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4100ಮೀ ರಿಲೇ, 4400ಮೀ ರಿಲೇ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net