

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆ. 14ರಿಂದ 30ರವರೆಗೆ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಪುರುಷರು ಹಾಗೂ ಮಹಿಳೆಯರು ಭಾಗವಹಿಸಬಹುದು.
ಕುಂದಗೋಳ ತಾಲೂಕು ಕ್ರೀಡಾಕೂಟವನ್ನು ಕುಂದಗೋಳದ ಜೆಎಸ್ಎಸ್ ವಿದ್ಯಾಪಿಠದ ಆವರಣದಲ್ಲಿ ಸೆ. 14ರಂದು ಬೆಳಗ್ಗೆ 9 ಗಂಟೆಗೆ, ಕಲಟಗಿಯ ಗಳಗಿ ಹುಲಕೊಪ್ಪ ಗ್ರಾಮದ ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೆ. 14ರಂದು ಬೆಳಗ್ಗೆ 9 ಗಂಟೆಗೆ, ಹುಬ್ಬಳ್ಳಿ ತಾಲೂಕಿನ ಹೆಬಸೂರ ಸೆಕೆಂಡರಿ ಶಾಲೆ ಆವರಣದಲ್ಲಿ ಸೆ. 15ರಂದು ಬೆಳಗ್ಗೆ 9 ಗಂಟೆಗೆ ಮತ್ತು ಅಣ್ಣಿಗೇರಿ ತಾಲೂಕಿನ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1 ಆವರಣದಲ್ಲಿ ಸೆ. 17ರಂದು ಬೆಳಗ್ಗೆ 9 ಗಂಟೆಗೆ, ನವಲಗುಂದ ತಾಲೂಕು ಮೊರಬ ಗ್ರಾಮದ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸೆ. 17ರಂದು ಬೆಳಗ್ಗೆ 9 ಗಂಟೆಗೆ, ಅಳ್ನಾವರ ತಾಲೂಕು ಕ್ರೀಡಾಂಗಣದಲ್ಲಿ ಸೆ. 18ರಂದು ಬೆಳಗ್ಗೆ 9 ಗಂಟೆಗೆ, ಧಾರವಾಡದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ. 20ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ.
ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳನ್ನು ಮಾತ್ರ ಜಿಲ್ಲಾ ಮಟ್ಟಕ್ಕೆ ನಿಯೋಜಿಸಲಾಗುವುದು. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.