ತಾಲೂಕು ಮಟ್ಟದ ಹಾಕಿ ಪಂದ್ಯಾವಳಿ

hocky
Published on

ಮಡಿಕೇರಿ: ಪ್ರಸಕ್ತ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿಯು ಮಂಗಳವಾರ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಸಾಯಿ ಹಾಕಿ ಮೈದಾನದಲ್ಲಿ ನಡೆಯಿತು.

ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ಸಹಾಯಕ ನಿರ್ದೇಶಕಿ ಮಿನಿ ಉಣ್ಣಿರಾಜ್ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿದರು. ಪಂದ್ಯಾವಳಿಯ ಮುಖ್ಯ ಅತಿಥಿಗಳಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ, ದೈಹಿಕ ಶಿಕ್ಷಕ ರಾಕಿ ಪೂವಣ್ಣ, ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನಿರ್ದೇಶಕ ಎನ್.ಎಸ್.ಚಿದಾನಂದ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಗಿರಿಧರ ಗೌಡ, ಭಾಗಮಂಡಲ ದೈಹಿಕ ಶಿಕ್ಷಣ ಉಪನ್ಯಾಸಕರು, ಮೂರ್ನಾಡು ದೈಹಿಕ ಶಿಕ್ಷಣ ಉಪನ್ಯಾಸಕರಾದ ಬೋಪಣ್ಣ ಇತರರು ಇದ್ದರು.

ಬಾಲಕಿಯರ ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸಂತ ಮೈಕಲರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ನಡುವೆ ನಡೆಯಿತು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ೪-೦ ಗೋಲ್‌ಗಳ ಅಂತರದಲ್ಲಿ ವಿಜೇತರಾದರು.

ಬಾಲಕರ ಪಂದ್ಯಾವಳಿಯು ಮೂರ್ನಾಡು ಪದವಿ ಪೂರ್ವ ಕಾಲೇಜು ಹಾಗೂ ಸಂತ ಮೈಕಲರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ನಡುವೆ ನಡೆಯಿತು. ಪಂದ್ಯಾಟದಲ್ಲಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ೩-೦ ಗೋಲ್‌ಗಳ ಅಂತರದಲ್ಲಿ ವಿಜೇತರಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net