ಅಳಿಯೂರಿನಲ್ಲಿ ತಾಲೂಕುಮಟ್ಟದ ಕಬಡ್ಡಿ ಪಂದ್ಯಾಟ

kabaddi
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ತಾಲೂಕುಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ನಡೆಯಿತು.

ವಾಲ್ಪಾಡಿ ಗ್ರಾಪಂ ಅಧ್ಯಕ್ಷೆ ವಿಶಾಲಾಕ್ಷಿ ಪಂದ್ಯಾಟ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಪ್ರದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನೆಲ್ಲಿಕಾರು ಗ್ರಾಪಂ ಅಧ್ಯಕ್ಷ ಉದಯ ಪೂಜಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಚಾಲಕ ಲಕ್ಷ್ಮಣ್ ಸುವರ್ಣ, ವಾಲ್ಪಾಡಿ ಗ್ರಾಪಂ ಸದಸ್ಯ ಶ್ರೀಧರ ಬಂಗೇರ, ಗ್ಯಾರಂಟಿ ಅನುಷ್ಠಾನ ಯೋಜನೆಯ ಅಧ್ಯಕ್ಷ ಅರುಣ್ ಶೆಟ್ಡಿ, ತಾ.ಪಂ. ಮಾಜಿ ಸದಸ್ಯ ರುಕ್ಕಯ್ಯ ಪೂಜಾರಿ, ಗುತ್ತಿಗೆದಾರ ಸುಕೇಶ್ ಶೆಟ್ಟಿ, ಉದ್ಯಮಿ ರಾಮನಾಥ್ ಸಾಲ್ಯಾನ್, ದಾನಿ ಆದಿರಾಜ್ ಜೈನ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಬಿ.ಅಳಿಯೂರು, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ನವೀನ್ ಆರ್.ಪುತ್ರನ್, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಚಿನ್ಮಯಾನಂದ ಮೂರ್ತಿ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಪ್ರಸ್ತಾವನೆಗೈದರು. ಹಿರಿಯ ಶಿಕ್ಷಕ ಸುಬ್ರಮಣ್ಯ ವಿ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಮಹಾದೇವ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net