ತಾಲೂಕುಮಟ್ಟದ ಖೋ-ಖೋ ಪಂದ್ಯಾಟ

Kdb_Kho-Kho
Published on

ಕಡಬ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಹಳೆನೇರೆಂಕಿ ಸರ್ಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ಸಂಯುಕ್ತ ಆಶ್ರಯದಲ್ಲಿ, ಪುತ್ತೂರು ತಾಲೂಕುಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ ಶುಕ್ರವಾರ ಹಳೆನೇರೆಂಕಿ ಸರ್ಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ರಾಮಕುಂಜ ಗ್ರಾ.ಪಂ ಅಧ್ಯಕ್ಷೆ ಸುಚೇತಾ ಬಿ. ಕ್ರೀಡಾಕೂಟ ಉದ್ಘಾಟಿಸಿದರು. ಹಳೆನೇರೆಂಕಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹೊನ್ನಪ್ಪ ಗೌಡ ಮರಂಕಾಡಿ ಶುಭಹಾರೈಸಿದರು.

ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಗೌಡ, ರಾಮಕುಂಜ ಗ್ರಾ.ಪಂ ಸದಸ್ಯರಾದ ಮಾಲತಿ ಕದ್ರ, ಕುಶಾಲಪ್ಪ ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಸೀತಾರಾಮ ಗೌಡ, ತಾಲೂಕು ಅಧ್ಯಕ್ಷ ಸುಧಾಕರ ರೈ, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಬಾಲಕೃಷ್ಣ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜನಾರ್ದನ ಕದ್ರ, ಆಲಂಕಾರು ಕ್ಲಸ್ಟರ್ ಸಿಆರ್‌ಪಿ ಪ್ರಕಾಶ್ ಬಾಕಿಲ ಉಪಸ್ಥಿತರಿದ್ದರು.

ಶಾಲೆಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರವೀಣ್ ಹಾಗೂ ಮನೋಜ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಹಳೆನೇರೆಂಕಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ದಿ.ವಿಶ್ವನಾಥ ಗೌಡರ ಸ್ಮರಣಾರ್ಥ ಪತ್ನಿ ಚೇತನಾ ಮತ್ತು ಮಕ್ಕಳು ಟಿ-ಶರ್ಟ್ ಕೊಡುಗೆಯಾಗಿ ನೀಡಿದರು. ದೈಹಿಕ ಶಿಕ್ಷಣ ಪ್ರಭಾರ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಬಾಕಿಲ ಪ್ರಸ್ತಾವಿಸಿದರು. ಹಳೆನೇರೆಂಕಿ ಶಾಲಾ ಮುಖ್ಯಶಿಕ್ಷಕ ವೈ.ಸಾಂತಪ್ಪ ಗೌಡ ಸ್ವಾಗತಿಸಿದರು. ಶಿಕ್ಷಕ ದಯಾನಂದ ಗೌಡ ವಂದಿಸಿದರು. ಶಿಕ್ಷಕ ನವೀನ್ ಕುಮಾರ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net