26ರಂದು ಗಣರಾಜ್ಯೋತ್ಸವ ಆಚರಿಸಲು ಸಹಕರಿಸಿ

ತಾಲೂಕುಮಟ್ಟದ ಅಧಿಕಾರಿಗಳ ಸಭೆ
ತಾಲೂಕುಮಟ್ಟದ ಅಧಿಕಾರಿಗಳ ಸಭೆ
Published on

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಅಧಿಕಾರಿ ವರ್ಗದ ಜತೆಗೆ ಸಾರ್ವಜನಿಕರು ಕೈಜೋಡಿಸುವ ಮೂಲಕ ದೇಶಭಕ್ತಿಯ ಸಂಕೇತವಾಗಿರುವ ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವವನ್ನು ಜ.26ರಂದು ಅದ್ದೂರಿಯಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಅಮೃತ್‌ಆತ್ರೇಶ್ ತಿಳಿಸಿದರು.
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೋಮವಾರ ಮಾತನಾಡಿದರು.
ಶಿಕ್ಷಕ ಕ್ಷೇತ್ರದ ಉಪ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಸರ್ಕಾರದ ನಿರ್ದೇಶದಂತೆ ಪ್ರತಿಯೊಬ್ಬರೂ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ತಾಲೂಕಿನ ಪ್ರತಿಯೊಬ್ಬರೂ ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಗಣರಾಜ್ಯೋತ್ಸವದ ಆಹ್ವಾನ ಪತ್ರಿಕೆ ಮತ್ತು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು. ಆಚರಣೆಗೆ ಸಂಬಂಧಿಸಿದಂತೆ ಹಂಚಿಕೆ ಮಾಡಿರುವ ಕಾರ್ಯಗಳಲ್ಲಿ ಲೋಪವಾಗದಂತೆ ಇಲಾಖೆಗಳ ಮುಖ್ಯಸ್ಥರು ಎಚ್ಚರಿಕೆವಹಿಸಬೇಕು. ಚುನಾವಣೆ ನೀತಿ ಸಂಹಿತೆ ಜಾರಿಯಲಿದ್ದು, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಇರುವುದಿಲ್ಲ. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅತ್ಯುತ್ತಮವಾಗಿ ಪ್ರದರ್ಶನ ನೀಡುವ ಶಾಲೆಗೆ ತಾಲೂಕು ಆಡಳಿತದಿಂದ ಬಹುಮಾನ ವಿತರಣೆ ಮಾಡಲಾಗುವುದು ಎಂದರು.
ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಪ್ರವಾಸಿಮಂದಿರದಿಂದ ಅಂಬೇಡ್ಕರ್ ಕ್ರೀಡಾಂಗಣದ ವರೆಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಂದ ಅದ್ದೂರಿ ಮೆರವಣಿಗೆ ಮಾಡಲು ತಿರ್ಮಾನಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆ ಎಡಿ ಎಂ.ವಾಣಿ, ಕಾರ್ಮಿಕ ನಿರೀಕ್ಷಕಿ ಧನಪಾಲ್, ಅಬಕಾರಿ ನಿರೀಕ್ಷಕಿ ಸುಮಲತಾ, ಆರಕ್ಷಕ ಉಪ ನಿರೀಕ್ಷಕಿ ಜಯಂತಿ, ರಾಜಸ್ವ ನಿರೀಕ್ಷಕ ಎ.ರವಿಕುಮಾರ್, ಗ್ರಾಮಲೆಕ್ಕಾಧಿಕಾರಿ ಮಾರುತಿ ಮತ್ತಿತರರು ಉಪಸ್ಥಿತರಿದ್ದರು.

ಮತದಾನ ದಿನ ಆಚರಣೆ: ಜ.25ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾತ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವ ಮತದಾರರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ತಹಸೀಲ್ದಾರ್ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net