

ಬೆಳ್ತಂಗಡಿ: ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಣವೇ ಅಡಿಪಾಯ. ಸಿಆರ್ಎಸ್ ಫಂಡ್ ಮೂಲಕ ತರಗತಿಗಳ ನಿರ್ಮಾಣಕ್ಕೆ ಪ್ರಾವಾಣಿಕವಾಗಿ ಶ್ರಮಿಸುತ್ತೇನೆ. ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದುಗಿಸಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಬೆಳ್ತಂಗಡಿ ಪಿಎಂಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ತಾಲೂಕು ಮಟ್ಟದ ಶಾಲಾ ಆರಂಭೋತ್ಸವ ಉದ್ಘಾಟಿಸಿ ಮಾತನಾಡಿದರು.
ತಾಪಂ ಇಒ ಭವಾನಿಶಂಕರ್ ಎನ್., ಬಿ.ಇ.ಒ.ವೆಂಕಟೇಶ್ ತುಳುಪುಳೆ ಶುಭಹಾರೈಸಿದರು. ಸರ್ಕಾರಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಮನಶ್ರೀ ಹಾಗೂ ಸುಪ್ರಿತಾ ಅವರನ್ನು ಗೌರವಿಸಲಾಯಿತು. ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರಕೃಷ್ಣ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿ ಬಸವಲಿಂಗಪ್ಪ ಉಪಸ್ಥಿತರಿದ್ದರು. ಸಹಶಿಕ್ಷಕಿ ರೇಣುಕಾ ನಿರೂಪಿಸಿದರು. ಮುಖ್ಯ ಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯ ವಂದಿಸಿದರು.
ಖಾಸಗಿ ಶಾಲೆಗಳ ಸಂಖ್ಯೆ ಹೆಚ್ಚಿದ್ದರೂ ಸರ್ಕಾರಿ ಶಾಲೆಯಲ್ಲಿ 350ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ವಿದ್ಯಾರ್ಜನೆ ನಡೆಸುತ್ತಿರುವುದು ಹೆಮ್ಮೆಯ ವಿಚಾರ. ನಮ್ಮ ಶಾಲೆ, ನಮ್ಮ ಜವಾಬ್ದಾರಿ ಅಡಿಯಲ್ಲಿ ತಾಲೂಕಿನಲ್ಲಿ ಕಾರ್ಯಕ್ರಮ ಮಾಡಲಾಗಿದೆ. ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರು ಶಾಲೆಯ ಸುರಕ್ಷತೆ ಬಗ್ಗೆ ನಿಗಾ ವಹಿಸಬೇಕು. ಭವಾನಿಶಂಕರ್ ಎನ್. ತಾಪಂ ಇಒ