ಪ್ರಯತ್ನದ ಕಡೆಗೆ ಗಮನ ಇರಲಿ

taluk level sports
taluk level sports
Published on

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಶಾಸಕ ಧೀರಜ್ ಮುನಿರಾಜು


ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಕ್ರೀಡೆ, ಶಿಕ್ಷಣದಲ್ಲಿ ಯಶಸ್ಸು ಗಳಿಸಲು ನಿರಂತರ ಅಭ್ಯಾಸ ಅಗತ್ಯ. ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸಾಧಿಸಲು ಶೇ.100ರಷ್ಟು ಪ್ರಯತ್ನಪಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ವಿದ್ಯಾನಿಧಿ ಸ್ವತಂತ್ರ ಪಿಯು ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು ತೂಬಗೆರೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ನಂತರ ಪಿಯು ಕಾಲೇಜಿನಲ್ಲಿ ತಮಗೆ ಇಷ್ಟವಾದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ವಿದ್ಯಾರ್ಥಿ ಜೀವನದಲ್ಲಿ ಇದು ಮುಖ್ಯ ಘಟ್ಟವಾಗಿದ್ದು, ಕ್ರೀಡೆ, ಶಿಕ್ಷಣಕ್ಕೆ ಇದು ಸೂಕ್ತ ವಯಸ್ಸು. ಈ ಸಮಯದಲ್ಲಿ ಜಿಲ್ಲೆ, ರಾಜ್ಯ ,ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಲು ನಿರಂತರ ಪ್ರಯತ್ನಿಸಬೇಕು ಎಂದರು.
ಕ್ರೀಡೆಗಳಲ್ಲಿ ಒಗ್ಗಟ್ಟಾಗಿ ಭಾಗವಹಿಸಬೇಕು. ಕ್ರೀಡೆ, ಶಿಕ್ಷಣದಲ್ಲಿ ಸದಾ ಉತ್ತಮವಾಗಿರಬೇಕು. ತಾಲೂಕಿನಲ್ಲಿ ಪಿಯು ಫಲಿತಾಂಶ ಕಳೆದ ಕೆಲ ವರ್ಷಗಳಿಂದ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಹೆಸರನ್ನು ರಾಷ್ಟ್ರ ಮಟ್ಟದಲ್ಲಿ ಕೊಂಡೊಯ್ಯಲು ಪ್ರಯತ್ನಿಸಬೇಕು. ಶೇ.100ರಷ್ಟು ಶ್ರಮವಹಿಸಬೇಕು. ಫಲಿತಾಂಶದ ಬಗ್ಗೆ ಗಮನ ಬೇಡ, ಪ್ರಯತ್ನದ ಕಡೆಗೆ ಮಾತ್ರ ಗಮನವಿರಬೇಕು. ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧ ಕಾಲೇಜಿಗೆ ಭೇಟಿ ನೀಡಿ, ಮಕ್ಕಳೊಂದಿಗೆ ಚರ್ಚಿಸಲಾಗುತ್ತದೆ. ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ, ಮೊಬೈಲ್, ಟಿವಿಗಳಿಂದ ದೂರವಿರಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net