ಶ್ರೇಷ್ಠ ವ್ಯಕ್ತಿಯಾಗಲು ಅಗತ್ಯ ನಿರಂತರ ಸಾಧನೆ : ಸುಮಂತ್ ಕುಮಾರ್ ಜೈನ್ ಹೇಳಿಕೆ

sports
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ವಿದ್ಯಾರ್ಥಿಗಳು ಕಲಿಕೆ, ಕ್ರೀಡೆ ಮತ್ತಿತರ ಚಟುವಟಿಕೆಗಳಲ್ಲಿ ನಿರಂತರ ಸಾಧನೆ ಮಾಡಬೇಕು, ಆಗ ಶ್ರೇಷ್ಠ ವ್ಯಕ್ತಿಗಳಾಗಲು ಸಾಧ್ಯ ಎಂದು ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.

ಶನಿವಾರ ಬಳಂಜ ಸ.ಉ.ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿ ಬಳಂಜ, ತಾ.ಮಟ್ಟದ ಕ್ರೀಡಾಕೂಟ ಸಂಘಟನಾ ಸಮಿತಿ ಬಳಂಜ, ಶಿಕ್ಷಣ ಟ್ರಸ್ಟ್ ಬಳಂಜ, ಅಮೃತಮಹೋತ್ಸವ ಸಮಿತಿ, ಹಳೇ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಬೆಳ್ತಂಗಡಿ ತಾಲೂಕುಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕರ, ಬಾಲಕಿಯರ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು.

ಉಜಿರೆ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಕ್ರೀಡಾಕೂಟ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳ ಬೆಳವಣಿಗೆಗೆ ಊರವರ ಕೊಡುಗೆ ಅಗತ್ಯವಾಗಿದ್ದು, ಬಳಂಜದಲ್ಲಿ ಉತ್ತಮ ಸಹಕಾರ ಸಿಗುತ್ತಿದೆ ಎಂದರು.

ಪ್ರಮೋದ್ ಕುಮಾರ್ ಜೈನ್ ಕ್ರೀಡಾ ಕೂಟದ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ ಕ್ರೀಡಾ ದ್ವಜಾರೋಹಣ ಮಾಡಿದರು.

ಬಳಂಜ ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಸಂತ ಸಾಲಿಯಾನ್, ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ., ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಪೇರಂದಬೈಲ್, ಟ್ರಸ್ಟಿಗಳಾದ ರಾಕೇಶ್ ಹೆಗ್ಡೆ, ಸಂತೋಷ್ ಕುಮಾರ್ ಕಾಪಿನಡ್ಕ, ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ದಿನೇಶ್ ಪಿ.ಕೆ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ,ನಿರಂಜನ್, ಅಖಿಲ್ ಮತ್ತಿತರರು ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯಶಿಕ್ಷಕಿ ಸುಲೋಚನಾ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರಂಗಸ್ವಾಮಿ ವಂದಿಸಿದರು. ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ನಿರೂಪಿಸಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣ, ಕ್ರೀಡೆಗೆ ಪ್ರೋತ್ಸಾಹ ಸಿಗಬೇಕು ಎಂಬುದೇ ಬದುಕು ಕಟ್ಟೋಣ ತಂಡದ ಉದ್ದೇಶ. ಇದುವರೆಗೆ ನೂರಾರು ವಿದ್ಯಾರ್ಥಿಗಳು ಕ್ರೀಡಾ ಪ್ರೋತ್ಸಾಹ ನೀಡಿದ್ದು 5 ಸರ್ಕಾರಿ ಶಾಲೆಗಳನ್ನು ನವೀಕರಣ ಮಾಡಲಾಗಿದೆ. ಬಳಂಜದಲ್ಲಿ ಸರ್ಕಾರಿ ಶಾಲೆಯ ಬೆಳವಣಿಗೆಯ ಬಗ್ಗೆ ಊರಿನವರಿಗೆ ಚಿಂತನೆಯಿದ್ದು ಇದು ಮೆಚ್ಚುವಂತಹದ್ದು. ಮುಂದಿನ ವಷರ್ದಲ್ಲಿ ಶಿಕ್ಷಣಕ್ಕಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ಶಿಕ್ಷಕರಿಗಾಗಿ ದೊಡ್ಡ ಕಾರ್ಯಕ್ರಮವನ್ನು ಬದುಕು ಕಟ್ಟೋಣ ತಂಡದಿಂದ ಮಾಡಲಾಗುವುದು. ಮೋಹನ್ ಕುಮಾರ್, ಉಜಿರೆ ಬದುಕು ಕಟ್ಟೋಣ ತಂಡದ ಸಂಚಾಲಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net