

ವಿಜಯವಾಣಿ ಸುದ್ದಿಜಾಲ ಸುಳ್ಯ
ಭಾರತೀಯ ಸಂಸ್ಕಾರ-ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಭಾ ಕಾರಂಜಿಯ ಮೂಲಕ ಸಾಧ್ಯವಿದು,್ದ ಇಂತಹ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಸಹಕಾರಿ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ದ.ಕ. ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯವರ ಕಚೇರಿ ಸುಳ್ಯ, ಜಾಲ್ಸೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳ ಸಹಭಾಗಿತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು.
ಸುಳ್ಯ ತಹಸೀಲ್ದಾರ್ ಮಂಜುಳ ಮಾತನಾಡಿ, ಶಿಕ್ಷಣದ ಪರಿಕಲ್ಪನೆಯಲ್ಲಿ ಮಕ್ಕಳಿಗೆ ಪಾಠದ ಜತೆಗೆ ಅವರ ಅಭಿರುಚಿ ಹಾಗೂ ಪ್ರತಿಭೆಗಳನ್ನು ಗುರುತಿಸುವ ಕೆಲಸವನ್ನು ಪ್ರತಿಭಾ ಕಾರಂಜಿ ಮೂಲಕ ಹೊರತರಲು ಸಾಧ್ಯವಾಗುತ್ತಿದೆ ಎಂದರು.
ಜಾಲ್ಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಿರುಮಲೇಶ್ವರಿ ಮರಸಂಕ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಮುಖರಾದ ನಾರಾಯಣ ಗೌಡ ಬೊಮ್ಮೆಟ್ಟಿ, ಸದಾನಂದ ಮಾವಜಿ, ಚಂದ್ರಶೇಖರ ಪೇರಾಲು, ಪ್ರಕಾಶ್ ಮೂಡಿತ್ತಾಯ, ತಿರುಮಲೇಶ್ವರಿ ಅರ್ಭಡ್ಕ, ಲೀಲಾವತಿ ವಿನೋಬನಗರ, ನ. ಸೀತಾರಾಮ, ಡಾ.ಗೋಪಾಲಕೃಷ್ಣ ಭಟ್ ಕಾಟೂರು, ಆಶಾ ನಾಯಕ್, ವೀಣಾ ಎಂ.ಟಿ., ಚಂದ್ರಶೇಖರ, ಧನಲಕ್ಷ್ಮೀ ಕುದ್ಪಾಜೆ, ಶ್ರೀಧರ ಗೌಡ, ದೇವರಾಜ, ಸುನೀಲ್ ಕುಮಾರ್ ಎ.ಎಂ., ಸೂಫಿ ಪೆರಾಜೆ, ಧನಂಜಯ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯಶಿಕ್ಷಕ ಗಿರೀಶ್ ಕುಮಾರ್ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜಯಪ್ರಸಾದ್ ಕಾರಿಂಜ ವಂದಿಸಿದರು. ಸಹಶಿಕ್ಷಕರಾದ ಪಾವನ ಹಾಗೂ ದಿವ್ಯ, ಶಿಕ್ಷಣ ಸಂಯೋಜಕಿ ಸಂಧ್ಯಾಕುಮಾರಿ ನಿರೂಪಿಸಿದರು.