ಪಠ್ಯೇತರ ಚಟುವಟಿಕೆ ಬದುಕಿಗೆ ಪೂರಕ : ಅಶೋಕ್ ನೆಕ್ರಾಜೆ ಹೇಳಿಕೆ

New Project
Published on

ಸುಬ್ರಹ್ಮಣ್ಯ: ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ವಿದ್ಯಾರ್ಥಿಗಳ ಬದುಕಿಗೆ ಪೂರಕವಾಗುತ್ತದೆ. ಆರೋಗ್ಯ ಸಮೃದ್ಧಿಗೆ ಕ್ರೀಡಾ ಚಟುವಟಿಕೆಗಳ ಪಾತ್ರ ಅನನ್ಯ. ಕ್ರೀಡಾಳುಗಳು ಕ್ರೀಡಾ ಸ್ಫೂರ್ತಿ ಮೈಗೂಡಿಸಿಕೊಳ್ಳಬೇಕು. ಶಿಸ್ತು, ಕಠಿಣ ಪರಿಶ್ರಮ ಕ್ರೀಡಾಳುಗಳ ಆಸ್ತಿ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು.

ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜು ಆಶ್ರಯದಲ್ಲಿ ಮಂಗಳವಾರ ಕಾಲೇಜು ಕ್ರೀಡಾಂಗಣದಲ್ಲಿ ಕಡಬ ತಾಲೂಕುಮಟ್ಟದ ಬಾಲಕ- ಬಾಲಕಿಯರ ಥ್ರೋಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಗ್ರಾಪಂ ಅಧ್ಯಕ್ಷೆ ಸುಜಾತಾ ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಚಾರ್ಯ ಸೋಮಶೇಖರ್ ನಾಯಕ್, ತಾಲೂಕು ಕ್ರೀಡಾ ಮಂಡಳಿ ಸಂಚಾಲಕ ಹ್ಯಾರಿಸ್, ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಶಿಕ್ಷಕ- ರಕ್ಷಕ ಸಂಘ ಅಧ್ಯಕ್ಷೆ ತ್ರಿವೇಣಿ ದಾಮ್ಲೆ, ಉಪಾಧ್ಯಕ್ಷ ಗುಣವರ್ಧನ ಕೆದಿಲ, ಹಿರಿಯ ವಿದ್ಯಾರ್ಥಿ ಸಂಘ ಉಪಾಧ್ಯಕ್ಷ ಲೋಕೇಶ್ ಬಿ.ಎನ್., ಉಪನ್ಯಾಸಕಿ ಸವಿತಾ ಕೈಲಾಸ್, ಕ್ರೀಡಾ ಕಾರ್ಯದರ್ಶಿ ಧನುಶ್ ಕಾಶಿಕಟ್ಟೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net