ತಾಲೂಕು ಸಾಹಿತ್ಯ ಸಮ್ಮೇಳನ ಆಮಂತ್ರಣ ಬಿಡುಗಡೆ

amanthrana
Published on

ಹೆಬ್ರಿ: ಶಿವಪುರದಲ್ಲಿ ಫೆ.16ರಂದು ನಡೆಯಲಿರುವ ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಗೌರವಾಧ್ಯಕ್ಷ ಶಂಕರನಾರಾಯಣ ಕೊಡಂಚ ಭಾನುವಾರ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಡಗಡೆಗೊಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲೂಕಿ ಘಟಕ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಮುದ್ದೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ರಾವ್, ಸ್ವಾಗತ ಸಮಿತಿ ಅಧ್ಯಕ್ಷ ಗಣೇಶ್ ಹಾಂಡ, ಸಂಚಾಲಕ ರಮಾನಂದ ಶೆಟ್ಟಿ, ಗೌರವ ಸಲಹೆಗಾರರಾದ ಮೋಹನದಾಸ್ ನಾಯಕ್, ಬೈಕಾಡಿ ಮಂಜುನಾಥ್ ರಾವ್ ಎಲಿಕೊಡು, ಲಕ್ಷ್ಮೀ ನಾರಾಯಣ ನಾಯಕ್ ಕನ್ಯಾನ, ಸುರೇಶ್ ಶೆಟ್ಟಿ ಹುಣ್ಸೇಡಿ, ವಿಶ್ವನಾಥ ನಾಯಕ್, ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಪೂಜಾರಿ, ನಾಯರ್ಕೋಡು ಸಂತೋಷ ಶೆಟ್ಟಿ, ಪ್ರಮುಖರಾದ ರಮೇಶ್ ಕುಮಾರ್, ಶೋಭಾ ಶೆಟ್ಟಿ, ಮುಖ್ಯ ಶಿಕ್ಷಕಿ ಗುಲಾಬಿ, ಸ್ವಾಗತ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರು, ಶಿವಪುರ ಗ್ರಾಮ ಪಂಚಾಯಿತಿ ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು.

ಗೌರವ ಕಾರ್ಯದರ್ಶಿ ಡಾ.ಪ್ರವೀಣ್ ಕುಮಾರ್ ಎಸ್. ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಮಂಜುನಾಥ್ ಕೆ.ಶಿವಪುರ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net