ಬೇಡಿಕೆ ಈಡೇರುವವರೆಗೂ ಕೆಲಸಕ್ಕೆ ಗೈರು

14 JLR 2
Published on

ಜಗಳೂರು: ಮೂಲ ಸೌಕರ್ಯ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಕಚೇರಿ ಮುಂಭಾಗ ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತು.

ಸರ್ಕಾರ ಈ ಹಿಂದೆ ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ. ನಾಲ್ಕು ದಿನಗಳಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬೇಡಿಕೆ ಈಡೇರುವವರೆಗೆ ಕೆಲಸಕ್ಕೆ ಹಾಜರಾಗುವುದಿಲ್ಲ. ಗ್ರಾಮಗಳಿಂದ ಜನರು ಬಂದು ಮನವಿ ಮಾಡಿದರೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಂಘದ ತಾಲೂಕು ಅಧ್ಯಕ್ಷ ಅರುಣ್ ತಿಳಿಸಿದರು.

ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಸಮಸ್ಯೆ ಆಲಿಸಿದರು. ಸಂಘದ ಕಾರ್ಯದರ್ಶಿ ಮಹೇಶ್, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ್, ಖಜಾಂಚಿ ಮಧುಸೂದನ್, ಸೊಕ್ಕೆ ದುರುಗೇಶ್, ಆರ್​ಐ ಧನಂಜಯ್, ಕೀರ್ತಿಕುಮಾರ್, ಆಡಳಿತಾಧಿಕಾರಿಗಳಾದ ಪ್ರದೀಪ್ ನಾಯಕ, ದಿಲೀಪ್ ಕುಮಾರ್, ಬಸಪ್ಪಗೌಡರ್, ಬಸವರಾಜ್, ಸರ್ವಶ್ರೀ, ಕೀರ್ತಿಕುಮಾರಿ, ನೇತ್ರಾವತಿ, ಶ್ವೇತಾ, ದಸಂಸ ಮುಖಂಡ ಗೌರಿಪುರ ಸತ್ಯಮೂರ್ತಿ ಮತ್ತಿತರರಿದ್ದರು.

ಸಾರ್ವಜನಿಕರ ಅಲೆದಾಟ: ಕಳೆದ ನಾಲ್ಕು ದಿನಗಳಿಂದ ಗ್ರಾಮ ಆಡಳಿತ ಅಧಿಕಾರಿಗಳು ಹಮ್ಮಿಕೊಂಡಿರುವ ಮುಷ್ಕರದ ಬಿಸಿ ಸಾರ್ವಜನಿಕರಿಗೆ ತಟ್ಟಿದೆ. ಕೊಳವೆ ಬಾವಿ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಹಣಿ ಸೇರಿ ಇತರೆ ಕೆಲಸಗಳಿಗೆ ನಿತ್ಯ ನೂರಾರು ಜನರು ಗ್ರಾಮ ಅಧಿಕಾರಿಗಳ ಬಳಿ ಬಂದು ಬರಿಗೈಲಿ ವಾಪಸಾಗುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net