ಅ.9ಕ್ಕೆ ತಾಲೂಕು ಪ್ರಗತಿ ಪರಿಶೀಲನಾ ಸಭೆ

nrp meeting
ಎನ್.ಆರ್.ಪುರ ತಾಲೂಕು ಕಚೇರಿಯಲ್ಲಿ ತರೀಕೆರೆ ಉಪ ವಿಭಾಗಾಧಿಕಾರಿ ಕಾಂತರಾಜ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಪೂರ್ವಭಾವಿ ಸಭೆ ನಡೆಯಿತು. ತನುಜಾ ಟಿ. ಸವದತ್ತಿ, ಎಚ್.ಡಿ.ನವೀನ್‌ಕುಮಾರ್ ಇತರರಿದ್ದರು.
Published on

ಎನ್.ಆರ್.ಪುರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ಅ.9ರಂದು ತಾಲೂಕಿನಲ್ಲಿ ಪ್ರಗತಿ ಪರಿಶೀಲನೆ ಸಭೆ ಆಯೋಜಿಸಲಾಗಿದೆ. ತಾಲೂಕಿನ ಎಲ್ಲ ಅಧಿಕಾರಿಗಳು ಇಲಾಖೆಗಳ ಮಾಹಿತಿಯೊಂದಿಗೆ ಸಿದ್ಧರಾಗಬೇಕು ಎಂದು ತರೀಕೆರೆ ಉಪ ವಿಭಾಗಾಧಿಕಾರಿ ಕಾಂತರಾಜ್ ಸೂಚಿಸಿದರು.

ಬುಧವಾರ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರಗತಿ ಪರಿಶೀಲನಾ ಸಭೆಗೆ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೂ ಭಾಗವಹಿಸಲಿದ್ದಾರೆ. ಪ್ರತಿ ಅಧಿಕಾರಿಯೂ ಇಲಾಖೆಗೆ ಸಂಬಂಧಿಸಿದ ಮಾಹಿತಿ ಸಿದ್ಧ ಮಾಡಬೇಕು. ಪ್ರಕೃತಿ ವಿಕೋಪದಲ್ಲಿ ಆಗಿರುವ ನಷ್ಟ, ಕೊಟ್ಟಿರುವ ಪರಿಹಾರದ ಮಾಹಿತಿ ಇರಬೇಕು. ಮುಖ್ಯವಾಗಿ ಅರಣ್ಯ ಹಾಗೂ ಕಂದಾಯ ಭೂಮಿಯ ಡೀಮ್ಡ್ ಫಾರೆಸ್ಟ್, ಜಂಟಿ ಸರ್ವೇ ಏನಾಗಿದೆ ಎಂಬ ಪೂರ್ಣ ಮಾಹಿತಿ ನೀಡಬೇಕು ಎಂದು ಮಾರ್ಗದರ್ಶನ ನೀಡಿದರು.
ಕುಡಿಯವ ನೀರಿನ ಮಾಹಿತಿ ನೀಡಬೇಕು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರೆ ಯಾವ ಬೆಳೆಗೆ ಹಾನಿಯಾಗಿದೆ ಎಂಬ ಸರಿಯಾದ ಮಾಹಿತಿ ನೀಡಬೇಕು. ಚಿಕ್ಕಮಗಳೂರಿನಲ್ಲಿ ನಡೆದ ಜನತಾ ದರ್ಶನದಲ್ಲಿ ಎನ್.ಆರ್.ಪುರ ತಾಲೂಕಿನಿಂದ ಬಂದ ಅರ್ಜಿಗಳ ಸ್ಥಿತಿ ಕುರಿತು ಆಯಾ ಇಲಾಖೆಯವರು ಸೂಕ್ತ ಉತ್ತರ ನೀಡಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ತನುಜಾ ಟಿ. ಸವದತ್ತಿ, ತಾಪಂ ಇಒ ಎಚ್.ಡಿ.ನವೀನ್‌ಕುಮಾರ್, ಜಿಪಂ ವಿಭಾಗದ ಇಂಜಿನಿಯರ್, ಕೆಇಬಿ, ಅರಣ್ಯ, ತೋಟಗಾರಿಕೆ, ಕೃಷಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net