

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ೫ನೇ ಸಾಹಿತ್ಯ ಸಮ್ಮೇಳನವನ್ನು ಸೆ. ೨೮, ೨೯ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೩ ವರ್ಷಗಳ ಬಳಿಕ ಚಿಕ್ಕಮಗಳೂರು ತಾಲೂಕಿನಲ್ಲಿ ಸಮ್ಮೇಳನ ನಡೆಯುತಿದೆ. ಕಸಾಪ ಮಾರ್ಗದರ್ಶನದೊಂದಿಗೆ ಹೋಬಳಿ ಘಟಕಗಳು, ನಗರ ಘಟಕ ಮತ್ತು ಮಹಿಳಾ ತಾಲೂಕು ಘಟಕದ ಆಶ್ರಯದಲ್ಲಿ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಹೇಳಿದರು.
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಡಾ. ಬೆಳವಾಡಿ ಮಂಜುನಾಥ್ ಆಯ್ಕೆಯಾಗಿದ್ದಾರೆ. ಸಮ್ಮೇಳನದ ಉದ್ಘಾಟನೆಯನ್ನು ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲೇಪುರಂ ಜಿ.ವೆಂಕಟೇಶ್ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಅವರು ರತ್ನಗಿರಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಶಾಸಕ ಎಚ್.ಡಿ ತಮ್ಮಯ್ಯ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಮುಖರಾದ ಡಾ. ಪಟೇಲ್ ಪಾಂಡು, ಎಂ.ಎಲ್. ಮೂರ್ತಿ, ಬಿಸಿಲೇಹಳ್ಳಿ ಸೋಮಶೇಖರ್, ಟಿ.ಡಿ ರಾಜೇಗೌಡ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್ ಭೋಜೇಗೌಡ, ನಯನ ಮೋಟಮ್ಮ, ಬೆಳ್ಳಿಪ್ರಕಾಶ್, ಗಾಯಿತ್ರಿ ಶಾಂತೇಗೌಡ, ಡಾ. ಅಂಶುಮAತ್, ಬಿ.ಎಚ್ ಹರೀಶ್, ಎ.ಎನ್ ಮಹೇಶ್ ಮತ್ತಿತರರು ಭಾಗವಹಿಸಲಿದ್ದಾರೆ. ಸಮ್ಮೇಳನಾಧ್ಯಕ್ಷರ ಭಾಷಣ ಪ್ರತಿಯನ್ನು ಆಶಾಕಿರಣ ಅಂಧಮಕ್ಕಳ ಶಾಲೆ ಅಧ್ಯಕ್ಷ ಡಾ. ಜೆ.ಪಿ ಕೃಷ್ಣೇಗೌಡ ಬಿಡುಗಡೆ ಮಾಡಲಿದ್ದಾರೆ ಎಂದು ವಿವರಿಸಿದರು.
ಸಮ್ಮೇಳನದ ಅಂಗವಾಗಿ ಧ್ವಜಾರೋಹಣ, ವಿವಿಧ ಜಾನಪದ ಕಲಾ ತಂಡಗಳೊAದಿಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಆಯೋಜಿಸಲಾಗುವುದು. ಸಮ್ಮೇಳನದಲ್ಲಿ ನಾಲ್ಕು ವಿವಿಧ ಗೋಷ್ಠಿಗಳು, ಬಹಿರಂಗ ಅಧಿವೇಶನ ನಡೆಯಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಾಲೂಕಿನ ಇಬ್ಬರು ಸಾಧಕರಾದ ಮಾಜಿ ಸಚಿವ ಸಿ.ಆರ್ ಸಗೀರ್ ಅಹಮದ್, ಹಿರಿಯ ವಕೀಲ ಬಿ.ಎಂ ಲಕ್ಷö್ಮಣ್‌ಗೌಡ ಅವರಿಗೆ ಕನ್ನಡ ಶ್ರೀ ಪ್ರಶಸ್ತಿ, ಇನ್ನಿಬ್ಬರು ಸಾಧಕರಾದ ಚುಟುಕು ಸಾಹಿತಿ ಅರವಿಂದ್ ದೀಕ್ಷಿತ್, ಉಪನ್ಯಾಸಕಿ ನಾಗಶ್ರೀ ತ್ಯಾಗರಾಜ್ ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಎಚ್.ಎ ನಾರಾಯಣಗೌಡ, ಬಿ.ತಿಪ್ಪೇರುದ್ರಪ್ಪ, ಅಪರ್ಣ ಜಯರಾಂ, ದಯಾನಂದ್ ಮಾವಿನಕೆರೆ, ರತೀಶ್, ಕಣಿವೆ ಚಂದ್ರೇಗೌಡ, ಸುರೇಶ್ ದೀಕ್ಷಿತ್, ವಾಸುಪೂಜಾರಿ ಸೇರಿದಂತೆ ೨೨ ಸಾಧಕರಿಗೆ ಕನ್ನಡ ಸಿರಿ ಸಾಧನೆ ಮನ್ನಣೆಯನ್ನು ನೀಡಲು ನಿರ್ಧರಿಸಲಾಗಿದೆ ಎಂದರು.
ಸೆ. ೨೯ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ದಿವ್ಯ ಸಾನಿಧ್ಯವನ್ನು ದೊಡ್ಡ ಕರುಬರಹಳ್ಳಿ ಬಸವತತ್ವ ಪೀಠದ ಪೀಠಾಧ್ಯಕ್ಷ ಡಾ. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿನ ವಹಿಸಲಿದ್ದಾರೆ. ಗೌರಿ ಬಿದನೂರು ಸ.ಪ್ರ.ದ ಕಾಲೇಜು ಪ್ರಾಚಾರ್ಯ ಹಾಗೂ ಸಾಹಿತಿ ಡಾ. ರಮೇಶ್‌ಚಂದ್ರ ದತ್ತ ಸಮಾರೋಪ ಭಾಷಣ ಮಾಡಲಿದ್ದಾರೆ. ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್ ಕನ್ನಡಶ್ರೀ ಪ್ರಶಸ್ತಿ ಪ್ರದಾನ ಮಾಡುವರು. ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.
ಸಮ್ಮೇಳನದ ಅಂಗವಾಗಿ ಪುಸ್ತಕ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸುವ ಕನ್ನಡದ ಬಂಧುಗಳಿಗೆ ಉಪಹಾರ, ಭೋಜನ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿಕೊಳ್ಳಲು ಸಿದ್ದತೆಗಳು ನಡೆಯುತ್ತಿದ್ದು, ಈ ಸಮ್ಮೇಳನದಲ್ಲಿ ಕನ್ನಡದ ಅಭಿಮಾನಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಕಸಾಪ ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್, ಗೌರವ ಕಾರ್ಯದರ್ಶಿಗಳಾದ ಜಿ.ಬಿ ಪವನ್, ಎಸ್.ಎಸ್ ವೆಂಕಟೇಶ್, ಕಸಬಾ ಹೋಬಳಿ ಘಟಕದ ಅಧ್ಯಕ್ಷೆ ವೀಣಾ ಮಲ್ಲಿಕಾರ್ಜುನ್ ಮತ್ತಿತರರಿದ್ದರು.