ಮಾ.೦೬ ರಂದು ತಾಲೂಕು ಸಾಹಿತ್ಯ ಸಮ್ಮೇಳನ ನಾಡೋಜ ಗೊ.ರು ಚನ್ನಬಸಪ್ಪ ಅವರಿಂದ ಸಮ್ಮೇಳನ ಉದ್ಘಾಟನೆ- ವೆಂಕಟೇಶ ಬೇವಿನಬೆಂಚಿ

VENKATESH
VENKATESH
Published on

ರಾಯಚೂರು ರಾಯಚೂರು ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಮಾ.೦೬ ರಂದು ಆಯೋಜನೆ ಮಾಡಲಾಗಿದೆ ಎಂದು ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ ೭.೩೦ಕ್ಕೆ ರಾಷ್ಟç ಧ್ವಜಾರೋಹಣವನ್ನು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ನೇರವೆರಿಸಲಿದ್ದಾರೆ. ನಾಡ ಧ್ವಜವನ್ನು ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಆಳ್ಳುಂಡಿ ಹಾಗೂ ಪರಿಷತ್ ಧ್ವಜಾರೋಹಣವನ್ನು ವೆಂಕಟೇಶ ಬೇವಿನ ಬೆಂಚಿ ನೇರವೆರಿಸಲಿದ್ದಾರೆ.

ಬೆಳಿಗ್ಗೆ ೮.೩೦ಕ್ಕೆ ಸಮ್ಮೇಳನಧ್ಯಕ್ಷರ ಮೆರವಣಿಗೆಯನ್ನು ಮಹಾನಗರ ಪಾಲಿಕೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ ಚಾಲನೆ ನೀಡಲಿದ್ದಾರೆ. ನಂತರ ರಂಗಮAದಿರದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದ ಸಾನಿಧ್ಯವನ್ನು ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರ ವಹಿಸಲಿದ್ದು, ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ, ನಗರ ಶಾಸಕ ಡಾ.ಶಿವರಾಜ ಪಾಟೀಲ್ ಆಗಮಿಸಲಿದ್ದಾರೆ.

ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾಡೋಜ ಗೊ.ರು ಚನ್ನಬಸಪ್ಪ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಸಂಸದ ಜಿ.ಕುಮಾರನಾಯಕ ಬಿಡುಗಡೆಗೊಳಿಸಲಿದ್ದಾರೆ. ಚಿತ್ರಕಲಾ ಪ್ರದರ್ಶನವನ್ನು ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಉದ್ಘಾಟಿಸಲಿದ್ದು, ಪುಸ್ತಕ ಮಳಿಗೆಗಳನ್ನು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಉದ್ಘಾಟಿಸಲಿದ್ದಾರೆ. ಹೊಸ ಕೃತಿಗಳನ್ನು ರಂಗಣ್ಣ ಪಾಟೀಲ್ ಅಳ್ಳುಂಡಿ ಬಿಡುಗಡೆಗೊಳಿಸಲಿದ್ದಾರೆ. ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ನರಸಿಂಹಲು ಮಾಡಗಿರಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಹನುಮಂತಪ್ಪ, ಮಾಜಿ ಶಾಸಕ ಎ.ಪಾಪಾರೆಡ್ಡಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ನಂತರ ತಾಲೂಕ ಸಾಹಿತ್ಯ, ಸಂಸ್ಕೃತಿ ವಿಷಯವಾಗಿ ವಿಚಾರಗೋಷ್ಟಿ ನಡೆಯಲಿದೆ. ಅಧ್ಯಕ್ಷತೆಯನ್ನು ಚನ್ನಬಸವ ಹೀರೆಮಠ ವಹಿಸಲಿದ್ದಾರೆ. ಎರಡನೇ ಗೋಷ್ಠಿಯ ಅಧ್ಯಕ್ಷತೆಯನ್ನು ಹೋರಾಟಗಾರ ರಾಘವೇಂದ್ರ ಕುಷ್ಟಗಿವಹಿಸಲಿದ್ದಾರೆ.

ನಂತರ ಕವಿಗೋಷ್ಟಿ ನಡೆಯಲಿದ್ದು ಪ್ರಜಾಕವಿ ರಮೇಶ ಗಬ್ಬೂರು ಅಧ್ಯಕ್ಷತೆಯಲ್ಲಿ ನಡೆಯಲಿದ್ದ ಯುವಕವಿಗಳು,

ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ನಂತರ ಬಹಿರಂಗ ಅಽÃವೇಶನ ಮತ್ತು ಸಮಾರೋಪ ಸಮಾರಂಭ

ನಡೆಯಲಿದೆ.

ಡಾ.ಶಿವರಾಜ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಸಮಾರೋಪ

ನುಡಿಗಳನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಅಮರೇಶ ಯತಗಲ್ ಮಾತನಾಡಲಿದ್ದಾರೆ.

ನಂತರ ಸಾಧಕರಿಗೆ ಗೌರವ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಕನ್ನಡ ಆಸ್ತಕರು, ಅಭಿಮಾನಿಗಳು, ವಿವಿಧ ಸಂಘಟನೆಗಳು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಯಪ್ಪ ಹೊಸೂರು, ಜಿ.ಸುರೇಶ, ಆಂಜಿನೇಯ್ಯ ಕಾವಲಿ, ರಾವುತರಾವ್ ಬರೂರ್, ರೇಖಾ ಬಡಿಗೇರ, ಪ್ರತಿಭಾ ಗೋನಾಳ,ಡಾ.ಬಿ.ವಿಜಯರಾಜೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net