ತಮಿಳುನಾಡು ಸಿಎಂ ಗೆ ವಿಮಾನ ನಿಲ್ದಾಣದಲ್ಲಿ ಯು.ಟಿ.ಖಾದರ್ ಸ್ವಾಗತ

 ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಆವರನ್ನು ಆರೋಗ್ಯ ಸಚಿವ ಯು.ಟಿ.ಖಾದರ್, ಅಪರ ಜಿಲ್ಲಾಧಿಕಾರಿ ರಾಜು ಕೆ., ಎಸಿ ಮೀನಾಕ್ಷಿ ಆರ್ಯು  ಮೊದಲಾದವರು ಸ್ವಾಗತಿಸಿದರು.
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಆವರನ್ನು ಆರೋಗ್ಯ ಸಚಿವ ಯು.ಟಿ.ಖಾದರ್, ಅಪರ ಜಿಲ್ಲಾಧಿಕಾರಿ ರಾಜು ಕೆ., ಎಸಿ ಮೀನಾಕ್ಷಿ ಆರ್ಯು ಮೊದಲಾದವರು ಸ್ವಾಗತಿಸಿದರು.
Published on
ಮಂಗಳೂರು: ಕೊಲ್ಲೂರು ದೇವಳಕ್ಕೆ ಆಗಮಿಸಲು ಆಗಮಿಸಿದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಆವರನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಶುಕ್ರವಾರ ಮಂಗಳೂರು ಅಂ.ರಾ. ವಿಮಾನ ನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಸ್ವಾಗತಿಸಿದರು.
ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ವಿಜಯ್ ಅವರು ಬಳಿಕ ರಸ್ತೆ ಮಾರ್ಗವಾಗಿ ಉಡುಪಿ, ಬೈಂದೂರು ಮೂಲಕ ಕೊಲ್ಲೂರು ದೇವಳಕ್ಕೆ ತಲುಪಿದರು. ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರಾವಳಿಗೆ ಭೇಟಿ ನೀಡಿದ್ದಾರೆ.
ಅಪರ ಜಿಲ್ಲಾಧಿಕಾರಿ ರಾಜು ಕೆ., ಎಸಿ ಮೀನಾಕ್ಷಿ ಆರ್ಯು ಮೊದಲಾದವರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net