

ಗದಗ: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಜಿಲ್ಲಾ ಟಕದ ಕರ್ನಾಟಕ ರಣಾ ವೇದಿಕೆ ವತಿಯಿಂದ ಶುಕ್ರವಾರ ಅಂಚೆ ಕಚೇರಿ ಮುತ್ತಿಗೆ ಹಾಕಿ ಇಂದು ಪ್ರತಿಭಟನೆ ನಡೆಸಲಾಯಿತು. ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದ ವಿರೋಧಿಸಿ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆ ಮಾಡಿದರು.
ಜಿಲ್ಲಾ ಅಧ್ಯ ಶರಣು ಗೋಡಿ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ 236 ತಾಲೂಕುಗಳ ಪೈಕಿ 192 ತಾಲೂಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ ಉಳಿದಿರುವುದು ಕೇವಲ 20 ಟಿಎಂಸಿ ನೀರು. ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿಎಂಸಿ ನೀರು ಮಾತ್ರ. ಇಂಥ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿ ದಿನ 5 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿ ಎಂದು ಹೇಳಿದರು.
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಪ್ರಾಧಿಕಾರದ ಆದೇಶ ಮುಖ್ಯವಲ್ಲ. ಈಗಲೂ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ರಾಜ್ಯದ ಎಲ್ಲ ಸಂಸದರೂ ದೆಹಲಿಯಲ್ಲಿ ಧರಣಿ ನಡೆಸಬೇಕು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು, ರಾಜೀನಾಮೆ ನೀಡಲೂ ಸಿದ್ಧವಾಗಿರಬೇಕು ಎಂದು ಆಗ್ರಹಿಸಿದರು.
ಹನುಮಂತ ಅಬ್ಬಿಗೇರಿ, ಚೇತನ್ ಕಣವಿ, ಸಾಮಾಜಿಕ ನಿಂಗನಗೌಡ ಮಾಲಿಪಾಟೀಲ, ಮುತ್ತಣ್ಣ ಚವಡಣ್ಣನವರ, ಭರಮಣ್ಣ ಕಿಲಾರಿ, ಹನುಮಂತ ಪೂಜಾರಿ, ಆನಂದ್ ಹೊಸಮನಿ, ಕುಮಾರ್ ರಾಯಣ್ಣವರ್, ಬಸವರಾಜ್ ಹೊಗೆಸೊಪ್ಪಿನ ಹಲವರು ಇದ್ದರು.