ಮಲೆ ಮಹದೇಶ್ವರ ಬೆಟ್ಟದಲ್ಲಿ ತಂಪೆರೆದ ಮಳೆರಾಯ

02 HANUR 4
ಮಲೆಮಹದೇಶ್ವರ ಬೆಟ್ಟ -ತಾಳುಬೆಟ್ಟ ಮಾರ್ಗದಲ್ಲಿ ಜೋರು ಮಳೆಯಾಗುತ್ತಿರುವುದು.
Published on

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಅರ್ಧಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿದಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಭಕ್ತರಿಗೆ ತಂಪು ಅನುಭವ ನೀಡಿತು.

ಮ.ಬೆಟ್ಟದಲ್ಲಿ ಬೆಳಗ್ಗೆ ಬಿಸಿಲಿನ ತಾಪಮಾನ ಹೆಚ್ಚಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು 2 ಗಂಟೆ ವೇಳೆಯಲ್ಲಿ ಆರಂಭವಾದ ಜೋರು ಮಳೆ ಅರ್ಧಗಂಟೆಗೂ ಹೆಚ್ಚು ಕಾಲ ಸುರಿಯಿತು. ಇದರಿಂದ ಶ್ರೀ ಕ್ಷೇತ್ರದಲ್ಲಿ ನೆರೆದಿದ್ದ ಭಕ್ತರಲ್ಲಿ ಹರ್ಷ ವ್ಯಕ್ತವಾಯಿತು. ಜತೆಗೆ ಅರಣ್ಯ ಪ್ರದೇಶದಿಂದ ಕೂಡಿರುವ ಮ.ಬೆಟ್ಟ ತಾಳುಬೆಟ್ಟ ಮಾರ್ಗದಲ್ಲೂ ಮಳೆಯಾದ ಪರಿಣಾಮ ರಸ್ತೆಯಲ್ಲಿ ನೀರು ಹರಿಯಿತು.

ಇದರಿಂದ ಅರಣ್ಯ ಪ್ರದೇಶ ಇನ್ನಷ್ಟು ಹಚ್ಚಹಸಿರಿನಿಂದ ಕಂಗೊಳಿಸುವುದಕ್ಕೆ ಪ್ರೇರಕ ಶಕ್ತಿಯಾಯಿತು. ಮ.ಬೆಟ್ಟದಲ್ಲಿ ಉತ್ತಮ ಮಳೆಯಾಗಿರುವ ದೃಶ್ಯವನ್ನು ಭಕ್ತರೊಬ್ಬರೂ ಸೆರೆ ಹಿಡಿದು ಶ್ರೀ ಮಲೆಮಹದೇಶ್ವರ ಸ್ವಾಮಿ ದಕ್ಷಿಣ ದ್ವಾರ ಹನೂರು ಕ್ಷೇತ್ರ ಫೇಸ್‌ಬುಕ್ ಖಾತೆಯಲ್ಲಿ ಹರಿಬಿಟ್ಟು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net