ಬರ ನಿರ್ವಹಣೆಗೆ ಸಿದ್ಧರಾಗಿ:ತಂಗಡಿಗಿ

TANGADAGI DROUGTH MEET KUSTAGI
TANGADAGI DROUGTH MEET KUSTAGI
ಕುಷ್ಟಗಿಯ ಸರ್ಕೀಟ್ ಹೌಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಮಂಗಳವಾರ ಜರುಗಿದ ಸಭೆಯಲ್ಲಿ ತಹಸೀಲ್ದಾರ್ ಶ್ರುತಿ ಮಳ್ಳಪ್ಪಗೌಡ ಮಾಹಿತಿ ನೀಡಿದರು. ಶಾಸಕ ದೊಡ್ಡನಗೌಡ ಪಾಟೀಲ್, ಅಧಿಕಾರಿಗಳು ಇದ್ದರು.
Published on

ಕೊಪ್ಪಳ (ಕುಷ್ಟಗಿ): ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ ಬೆಳೆಗಳು ಮಳೆ ಅಭಾವದಿಂದ ಹಾಳಾಗಿದ್ದು, ಬರದ ಛಾಯೆ ಆವರಿಸಿದೆ. ಬರ ನಿರ್ವಹಣೆಗೆ ಅಧಿಕಾರಿಗಳು ಅಗತ್ಯ ಕ್ರಮಕ್ಕೆ ಮುಂದಾಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗೆ ಹೇಳಿದರು.

ಪಟ್ಟಣದ ಸರ್ಕೀಟ್ ಹೌಸ್‌ನಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಜಮೀನುಗಳಿಗೆ ತೆರಳಿ ಬೆಳೆಗಳ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ವರದಿ ಆಧರಿಸಿ ಸೆ.17ರಂದು ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಬರಪೀಡಿತ ತಾಲೂಕುಗಳ ಘೋಷಿಸಲಾಗುತ್ತದೆ. ಮಳೆ ಅಭಾವದಿಂದ ಕುಡಿವ ನೀರಿನ ಸಮಸ್ಯೆಯೂ ಉಲ್ಬಣಗೊಳ್ಳುವ ಸಾಧ್ಯತೆ ಇದೆ.

ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಬಿಡುಗಡೆಯಾಗುವ ಅನುದಾನದ ಸಮರ್ಪಕ ಬಳಕೆ ಮಾಡಿ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು. ಪಂಪ್ ಸೆಟ್ ಆಧಾರಿತ ನೀರಾವರಿ ಜಮೀನುಗಳಿಗೆ ವಿದ್ಯುತ್ ಸಂಪರ್ಕ ನೀಡುವಲ್ಲಿ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸೇರಿ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

ಕುಷ್ಟಗಿಯ ಸರ್ಕೀಟ್ ಹೌಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಮಂಗಳವಾರ ಜರುಗಿದ ಸಭೆಯಲ್ಲಿ ತಹಸೀಲ್ದಾರ್ ಶ್ರುತಿ ಮಳ್ಳಪ್ಪಗೌಡ ಮಾಹಿತಿ ನೀಡಿದರು. ಶಾಸಕ ದೊಡ್ಡನಗೌಡ ಪಾಟೀಲ್, ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net