ಟ್ಯಾಂಕರ್- ಲಾರಿ ಮುಖಾಮುಖಿ ಡಿಕ್ಕಿ : ಇಬ್ಬರು ಚಾಲಕರಿಗೆ ಗಂಭೀರ ಗಾಯ

Bagalakot2
ಲಾರಿಗೆ ಡಿಕ್ಕಿ ಹೊಡೆದ ಟ್ಯಾಂಕರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿರುವುದು.
Published on

ಬಾಗಲಕೋಟೆ: ಹುನಗುಂದ ತಾಲೂಕಿನ ಕಮತಗಿ-ಅಮೀನಗಡ ಮಾರ್ಗ ಮಧ್ಯದಲ್ಲಿ ಶುಕ್ರವಾರ ಬೆಳಗಿನ ಜಾವ ಟ್ಯಾಂಕರ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರೂ ಚಾಲಕರು ಗಂಭೀರ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಲಾರಿ ಉರುಳಿ ರಸ್ತೆ ಬದಿಯಲ್ಲಿ ಬಿದ್ದಿದೆ. ಟ್ಯಾಂಕರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಓರ್ವ ಚಾಲಕ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ, ಮತ್ತೊಬ್ಬ ಚಾಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದವರಿಗೆ ಸೇರಿದ್ದು, ಟ್ಯಾಂಕರ್ ಬಳ್ಳಾರಿ ಮೂಲದ್ದು ಎಂದು ತಿಳಿದು ಬಂದಿದೆ. ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net