

ಹಿರೀಸಾವೆ: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಟ್ಯಾಲೆಂಟ್ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಹಾಸನ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಹಿರೀಸಾವೆ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ತನ್ಮಯ್ ಕೆ.ಗೌಡ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸೆ.22 ಹಾಗೂ ಸೆ.23 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಲಾ ಮುಖ್ಯಶಿಕ್ಷಕಿ ಪಾರ್ವತಮ್ಮ, ಸಹ ಶಿಕ್ಷಕರಾದ ಅಶೋಕ್ ಕುಮಾರ್, ಸಿ.ಎಸ್.ಜ್ಯೋತಿಲಕ್ಷ್ಮೀ, ಮಮತಾ ಹಾಗೂ ಪಾಲಕರು ಅಭಿನಂದಿಸಿದ್ದಾರೆ.