

ಸುಳ್ಯ: ಇತ್ತೀಚೆಗೆ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಯೋಗ ಸ್ಪರ್ಧೆಯಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿ ತನುಷ್ ಎಂ.ಎಚ್ ದಕ್ಷಿಣ ಕನ್ನಡ ಜಿಲ್ಲಾ ತಂಡ ಪ್ರತಿನಿಧಿಸಿ 14ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 9ರಿಂದ ಚಿತ್ರದುರ್ಗದಲ್ಲಿ ನಡೆಯುವ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಇವರು ಮೈಸೂರು ವಿಭಾಗವನ್ನು ಪ್ರತಿನಿಧಿಸಲಿದ್ದಾರೆ.