ಎಚ್. ವಿಶ್ವನಾಥ್ ಇಂಡಿಯಾ ಟೂರ್ ಹೊಡೆದು ಬಂದ್ರೂ ಇನ್ನೂ ಬುದ್ಧಿ ಬಂದಿಲ್ಲ : ತನ್ವೀರ್ ಸೇಠ್ ವ್ಯಂಗ್ಯ

tanveer
Published on

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು ಎಂಬ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತನ್ವೀರ್ ಸೇಠ್, ವಿಶ್ವನಾಥ್ ಅವರಿಗೆ ವಯಸ್ಸಿನ ಸಮಸ್ಯೆ ಇದೆ. ಹಾಗಾಗಿ ಅವರು ಏನೇನೋ ಮಾತನಾಡುತ್ತಾರೆ. ಅವರ ಮಾತಿನ ಮೇಲೆ ಅವರಿಗೇ ನಿಗಾ ಇರುವುದಿಲ್ಲ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಹೇಗೆ ಸಾಧ್ಯ? ಈಗಾಗಲೇ 15ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಲಕ್ಷ್ಮಣ್ ಉಮೇದುವಾರಿಕೆ ವಾಪಾಸ್ ಪಡೆದರೆ ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ ಹಾಗೆ ಆಗುತ್ತಾ ಎಂದು ಪ್ರಶ್ನಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅನ್ನುವುದು ಒಂದು ಪ್ರಕ್ರಿಯೆ, ಆ ಪ್ರಕ್ರಿಯೆ ನಡೆಯಲೇ ಬೇಕು. ವಿಶ್ವನಾಥ್ ಆಲ್ ಇಂಡಿಯಾ ಟೂರ್ ಹೊಡೆದು ಬಂದ್ರೂ ಇನ್ನೂ ಅವರಿಗೆ ಬುದ್ಧಿ ಬಂದಿಲ್ಲ ಅನ್ಸುತ್ತೆ. ಅವರು ಮೊದಲು ಯಾವ ಪಕ್ಷದಲ್ಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ. ವಿಶ್ವನಾಥ್ ಹೇಳಿಕೆಯಿಂದ ನಮಗೆ ಯಾವುದೇ ರೀತಿಯಲ್ಲೂ ಹಿನ್ನಡೆ ಆಗುವುದಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಗೆಲುವಿನ ವಾತಾವರಣ ಇದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net