ಪ್ರತಾಪ್ ಸಿಂಹ ಬಗ್ಗೆ ಅನುಕಂಪ ತನ್ವೀರ್ ಸೇಠ್ ಅನುಕಂಪ..!

PRATAP SIMHA
Published on

ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ನೀಡದೆ ಇರುವುದಕ್ಕೆ ನಮಗೆ ಅನುಕಂಪವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.

ಅವರಿಗೆ ಟಿಕೆಟ್ ತಪ್ಪಲು ಕಾರಣವೇನು ಎಂಬುದನ್ನು ಬಿಜೆಪಿಯವರೇ ಹೇಳಬೇಕು. ಬಿಜೆಪಿ ಮತ್ತು ಜಾತ್ಯತೀತ ಜನತಾದಳ ಹಿಂದಿನಿಂದಲೂ ಒಳಒಪ್ಪಂದ ಮಾಡಿಕೊಂಡು ಬರುತ್ತಲೆ ಇದೆ. ಆದರೆ, ಇದೀಗ ಬಹಿರಂಗವಾಗಿ ಮೈತ್ರಿ ಮಾಡಿಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಲಕ್ಷ್ಮಣ್ ಗೆಲುವಿನಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಪ್ರಮುಖ ಪಾತ್ರ ನಿರ್ವಹಸಲಿದೆ. ಲಕ್ಷ್ಮಣ್ ಗೆಲುವು ಸಾಧಿಸುವುದು ನೂರಕ್ಕೆ ನೂರರಷ್ಟು ನಿಶ್ಚಿತ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಮಾತಿನಂತೆ ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆ ಹಾಗೂ ಅನ್ನಭಾಗ್ಯವನ್ನು ಸಮರ್ಪಕವಾಗಿ ಜಾರಿಗೊಳಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net