ಬಸವನಪುರ ಸರ್ಕಾರಿ ಶಾಲೆಗೆ ತಾಪಂ ಇಒ ಭೇಟಿ

31hgr2
ಬಸವನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತಾಪಂ ಇಒ ಎಚ್.ಜಿ.ಶ್ರೀನಿವಾಸ್ ದಿಢೀರ್ ಭೇಟಿ ಪರಿಶೀಲನೆ ನಡೆಸಿದರು.
Published on

ಹಲಗೂರು: ಸಮೀಪದ ಬಸವನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತಾಪಂ ಇಒ ಎಚ್.ಜಿ.ಶ್ರೀನಿವಾಸ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.


ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಶುದ್ಧ ನೀರು ಒದಗಿಸಲು ಕ್ರಮ ವಹಿಸಬೇಕು. ಅಡುಗೆ ಮನೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಮಕ್ಕಳಿಗೆ ಶುದ್ಧ ಆಹಾರ ವಿತರಿಸಬೇಕು. ಶಾಲಾ ಅವರಣದಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.
ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಪಾಲಕರು ಉದಾಸೀನ ತೋರುತ್ತಾರೆ. ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂಬ ಅರಿವು ಮೂಡಿಸಿದಾಗ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಲು ಸ್ಥಳೀಯ ಆಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಶ್ರಮಿಸುತ್ತಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಶಿಕ್ಷಕರು, ಎಸ್.ಡಿ.ಎಂ.ಸಿ ಮತ್ತು ಶಾಲಾ ಸಿಬ್ಬಂದಿ ಒಗ್ಗೂಡಿ ಕೆಲಸ ಮಾಡಬೇಕೆಂದು ಎಂದು ಸಲಹೆ ನೀಡಿದರು.
15ನೇ ಹಣಕಾಸು ಅನುದಾನದ ಅಡಿಯಲ್ಲಿ ಶಾಲೆಯ ಅಡುಗೆ ಕೋಣೆಗೆ ಬಣ್ಣ ಬಳಿಸಬೇಕು ಮತ್ತು ಶಾಲೆಯ ಸುತ್ತಮುತ್ತ ಕಲುಷಿತ ನೀರು ನಿಲ್ಲದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಪ್ರಭಾರ ಮುಖ್ಯ ಶಿಕ್ಷಕಿ ಸುಕನ್ಯಾ, ಡಿ.ಹಲಸಹಳ್ಳಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಶಿವಕುಮಾರ್, ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ಸುನೀಲ್ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net