ಅಷ್ಟ ಮಠಾಧೀಶರಿಂದ ತಪ್ತ ಮುದ್ರಾಧಾರಣೆ

webbbbb
Published on

ಉಡುಪಿ: ಪ್ರಥಮೈಕಾದಶಿ ಪ್ರಯುಕ್ತ ಮಂಗಳವಾರ ಅಷ್ಟ ಮಠಾಧೀಶರು ಉಡುಪಿ, ಬೆಂಗಳೂರು ಸಹಿತ ವಿವಿಧೆಡೆ ತಪ್ತ ಮುದ್ರಾಧಾರಣೆ ಮಾಡಿದರು.

ಉಡುಪಿ ಕೃಷ್ಣ ಮಠದಲ್ಲಿ ಬೆಳಗ್ಗೆ ಋತ್ವಿಜರಿಂದ ಸುದರ್ಶನ ಹೋಮ ನಡೆಯಿತು. ನಂತರ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಮುದ್ರೆ ಧರಿಸಿ, ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿಯವರಿಗೆ ತಪ್ತ ಮುದ್ರೆ ನೀಡಿದರು. ಕೋವಿಡ್ ಮಾರ್ಗಸೂಚಿಯಂತೆ ದೈಹಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪರ್ಯಾಯ ಶ್ರೀಗಳು ರಾಜಾಂಗಣದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಭಕ್ತರಿಗೆ ಮುದ್ರಾಧಾರಣೆ ಮಾಡಿದರು.

ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ರಥಬೀದಿಯ ಕಾಣಿಯೂರು ಮಠದಲ್ಲಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಸೋಂದಾ ಕ್ಷೇತ್ರದಲ್ಲಿ ಸೋದೆ ವಾದಿರಾಜ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹಾಗೂ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ತಪ್ತಮುದ್ರಾಧಾರಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net