ಸಿಗಂದೂರು ದೇಗುಲದಲ್ಲಿ ತಾರಕ ಹೋಮ

22 bkd 1
ಅಯೋಧ್ಯೆ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಹೋಮ ನೆರವೇರಿಸುತ್ತಿರುವುದು.
Published on

ಬ್ಯಾಕೋಡು: ಅಯೋಧ್ಯೆಯಲ್ಲಿ ಬಾಲರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಸೋಮವಾರ ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಹೋಮ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಬೆಳಗ್ಗೆ 9.30ಕ್ಕೆ ಶ್ರೀ ರಾಮತಾರಕ ಹೋಮ, ಚಂಡಿಕಾ ಹವನ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶ್ರೀರಾಮನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಸ್ಥಳೀಯ ಭಜನಾ ತಂಡಗಳಿಂದ ನಿರಂತರವಾಗಿ ರಾಮ ನಾಮ ಸ್ಮರಣೆ ನೆಡೆಯಿತು. ಜತೆಗೆ ಬಂದಂತಹ ಭಕ್ತರಿಗೆ ಲಾಡು, ಕೋಸಂಬರಿ, ಪಾನಕ ವಿತರಿಸಿ ಸಂಭ್ರಮಿಸಲಾಯಿತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ದೇವಸ್ಥಾನದ ಕಾರ್ಯದರ್ಶಿ ಎಚ್.ಆರ್.ರವಿಕುಮಾರ್, ಸಿಬ್ಬಂದಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net