ಶಿಸ್ತು ಅಳವಡಿಸಿಕೊಳ್ಳಲಿ

22Anand10
Published on

ಬೆಳಗಾವಿ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಮಾಡಿದರೆ ಗುರಿ ತಲುಪಲು ಸಾಧ್ಯ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಉಪನ್ಯಾಸಕ ಕನಕಪ್ಪ ಪೂಜಾರ ಹೇಳಿದರು.

ನಗರದ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಒಕ್ಕೂಟ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಆಧುನಿಕತೆಗೆ ತಕ್ಕಂತೆ ಬೋಧನಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಪ್ರಾಚಾರ್ಯ ಡಾ. ವಿ.ಪಿ.ಕುರಿ, ಸಂಯೋಜಕರಾದ ಭುವನೇಶ್ವರಿ ಪಾಟೀಲ, ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ ಪ್ರವೀಣ ಪಾಟೀಲ, ಸುಶ್ಮಿತಾ, ವಿಠ್ಠಲ ವಿಭೂತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net