ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

Published on

ಕೊಪ್ಪಳ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ ಅಭ್ಯರ್ಥಿಗಳಿಗೆ 30 ದಿನಗಳ ಎಲೆಕ್ಟ್ರಿಕ್​ ಮೋಟಾರ್​ ರಿವೈಂಡಿಂಗ್​ ತರಬೇತಿ ಮತ್ತು ಮೊಬೈಲ್​ ರಿಪೇರಿ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅರ್ಜಿದಾರರಿಗೆ ಜುಲೈ 30 ರಂದು ಸಂದರ್ಶನ ನಡೆಯಲಿದ್ದು, ಆಗಸ್ಟ್​ 1 ರಿಂದ ತರಬೇತಿ ಪ್ರಾರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಫಿದೊಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಪಾಸ್​ ಆಗಿರಬೇಕು. ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.

ನಿರ್ದೇಶಕರು, ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ, ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್​ ಹತ್ತಿರ, ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08539-231038, 9483618178, 9481085217, 7259073827 ಗೆ ಸಂಪರ್ಕಿಸಬಹುದು ಎಂದು ಆರ್​ಸೆಟಿ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net