ಸಮನ್ವಯದಿಂದ ಕಾರ್ಯ ನಿರ್ವಹಣೆ: ಶಾಸಕಿ ಭಾಗೀರಥಿ ಮುರುಳ್ಯ ಸಲಹೆ

Sul_Contractors
Published on

ವಿಜಯವಾಣಿ ಸುದ್ದಿಜಾಲ ಸುಳ್ಯ

ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜನರ ಸೇವೆ ಮಾಡಬೇಕು. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಸಂಯಮದಿಂದ ವರ್ತಿಸಬೇಕು. ಅಂತೆಯೇ ಗುತ್ತಿಗೆದಾರರು ಸಮಾಜದ ಹಿತದೃಷ್ಟಿಯಿಂದ ಕೆಲಸ ನಿರ್ವಹಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ತಾಲೂಕು ಲೋಕೋಪಯೋಗಿ ಮತ್ತು ಜಿಲ್ಲಾ ಪಂಚಾಯಿತಿ ಗುತ್ತಿಗೆದಾರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ಬಾಳುಗೋಡು ಅಧ್ಯಕ್ಷತೆ ವಹಿಸಿದ್ದರು. 2024-27ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ನಾಯ್ಕ ಉಪ್ಪಿನಂಗಡಿ ಪದಪ್ರದಾನ ನೆರವೇರಿಸಿದರು.

ಮುಖ್ಯ ಅಭ್ಯಾಗತರಾಗಿ ಸೂಪರಿಂಟೆಂಡೆಂಟ್ ಇಂಜಿನಿಯರ್ ನರಸಿಂಹರಾಜ್ ಮಂಗಳೂರು, ಸರ್ಕಾರದ ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಅಟಲ್‌ಜೀ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಹರೀಶ್ ಕಂಜಿಪಿಲಿ, ಆರ್.ಡಬ್ಲ್ಯೂ.ಎಸ್.ಎಸ್. ಎಕ್ಸಿಕ್ಯುಟಿವ್ ಇಂಜಿನಿಯರ್ ರಘುನಾಥ್, ಹಿರಿಯ ಗುತ್ತಿಗೆದಾರ ಗೋಪಾಲ ಕರೋಡಿ ಉಪಸ್ಥಿತರಿದ್ದರು.

ಸಂಘದ ನೂತನ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಸಭೆ ನಡೆಯಿತು. ಕಾರ್ಯದರ್ಶಿ ಮನುದೇವ ಪರಮಂಡಲ, ಖಜಾಂಜಿ ಗಿರೀಶ್ ನಾರ್ಕೋಡು ಇದ್ದರು. ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಭರತ್ ಮುಂಡೋಡಿ ಮತ್ತು ಇಂಜಿನಿಯರ್ ಮಣಿಕಂಠ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸೌಮ್ಯ ಪ್ರಾರ್ಥಿಸಿದರು. ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಸ್ವಾಗತಿಸಿ, ಖಜಾಂಚಿ ಸುಬೋಧ್ ಶೆಟ್ಟಿ ಮೇನಾಲ ಗುತ್ತಿಗೆದಾರರ ಸಮಸ್ಯೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಮನುದೇವ್ ಪರಮಲೆ ವಂದಿಸಿದರು. ಇಂಜಿನಿಯರ್ ನವನೀತ್ ರೈ ಪೇರಾಲು ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net