

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಟಾಸ್ಕ್ಪೋರ್ಸ್ ಸಮಿತಿ ಸಭೆ ಗಂಗೊಳ್ಳಿ ಗ್ರಾಪಂ ಸಭಾಭವನದಲ್ಲಿ ಶನಿವಾರ ನಡೆಯಿತು.
ಗಂಗೊಳ್ಳಿ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಡೆಂೆ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಮತ್ತು ಮುಂಗಾರು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಡೆಂೆ ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕರಪತ್ರ ಬಿಡುಗಡೆ ಮಾಡಲಾಯಿತು.
ಗ್ರಾಪಂ ಆಡಳಿತಾಧಿಕಾರಿ ವೀಣಾ ಜಿ.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಬಂದರು ಇಲಾಖೆ ಅಧಿಕಾರಿ ಗೌಸ್ ಅಲಿ, ಗಂಗೊಳ್ಳಿ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಸಂಜೀವ ಅರಕೇರಿ, ಪೊಲೀಸ್ ಸಿಬ್ಬಂದಿ ಕೇಶವ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಮಾಶಂಕರ ಎಚ್., ಗ್ರಾಮ ಆಡಳಿತಾಧಿಕಾರಿ ಅಂಜಿನಪ್ಪ ಎಸ್., ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.