

ದಾವಣಗೆರೆ: ಚಲಿಸುತ್ತಿದ್ದ ಟಾಟಾ ಇಂಡಿಕಾ ಕಾರು ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಗುರುವಾರ ಬೆಳಗ್ಗೆ ಹರಪನಹಳ್ಳಿ ತಾಲೂಕಿನಲ್ಲಿ ನಡದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.
ಹರಪನಹಳ್ಳಿ ತಾಲೂಕಿನ ಚನ್ನಳ್ಳಿ ತಾಂಡಾದಲ್ಲಿ ಇಂದು ಬೆಳಗ್ಗೆ ಈ ದುರಂತ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಸರಳ ದಸರಾ ನಿಶ್ಚಿತ, ಜಂಬೂಸವಾರಿ ಉತ್ಸವ ಅನಿಶ್ಚಿತ
ಚನ್ನಳ್ಳಿ ತಾಂಡಾದಿಂದ ಖಾಸಗಿ ವಿಂಡ್ ಮಿಲ್ಗೆ ಕೆಲಸಗಾರರನ್ನು ಇಂಡಿಕಾ ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕಾರಿನ ಬ್ಯಾಟರಿ ಬ್ಲಾಸ್ಟ್ ಆಗಿ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.