ಏ.10ರಿಂದ ರಾಜ್ಯ ಮಟ್ಟದ ಭಜನಾ ಸ್ಪರ್ಧೆ

Udupi Bhajane
Published on

ಮೈಸೂರು: ಹುಬ್ಬಳ್ಳಿಯ ಸಿದ್ಧಾರೂಢಸ್ವಾಮಿ ಮಠದಲ್ಲಿ ಏ.10 ರಿಂದ 15ರವರೆಗೆ ರಾಜ್ಯ ಮಟ್ಟದ 9ನೇ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸ್ಪರ್ಧಾ ಸಮಿತಿ ಅಧ್ಯಕ್ಷ ಶಾಮಾನಂದ ಬಿ.ಪೂಜೇರಿ ತಿಳಿಸಿದರು.

ಏ.10ರಂದು ಬೆಳಗ್ಗೆ 9 ಗಂಟೆಗೆ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂ., ದ್ವಿತೀಯ ಬಹುಮಾನವಾಗಿ 80 ಸಾವಿರ ರೂ., ತೃತೀಯ ಬಹುಮಾನವಾಗಿ 70 ಸಾವಿರ ರೂ. ಹಾಗೂ ಸಮಾಧಾನಕರ ಬಹುಮಾನವಾಗಿ 9 ಸಾವಿರ ರೂ. ನೀಡಲಾಗುತ್ತದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

16 ವರ್ಷದ ಒಳಗಿನ ಬಾಲಕ, ಬಾಲಕಿಯರ ತಂಡಗಳಿಗೆ ಪ್ರತಿಭಾ ಪುರಸ್ಕಾರವಾಗಿ ಹತ್ತು ಸಾವಿರ, ಮಹಿಳಾ ಭಜನಾ ತಂಡಕ್ಕೆ ಹತ್ತು ಸಾವಿರ ರೂ. ಪುರಸ್ಕಾರ ನೀಡಲಾಗುವುದು. ವೈಯಕ್ತಿಕ ಬಹುಮಾನಗಳೂ ಇವೆ. ಹೆಸರು ನೋಂದಾಯಿಸಿಕೊಳ್ಳಲು ಏ.9 ಕೊನೇ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಮೊ. 98801 69881 ಸಂಪರ್ಕಿಸಬಹುದಾಗಿದೆ ಎಂದರು.
ಆಯೋಜಕರಾದ ಶ್ರೀ ಶಿವಾನಂದ ಸ್ವಾಮೀಜಿ, ಶ್ರೀ ಆತ್ಮಾನಂದ ಸ್ವಾಮೀಜಿ, ಬಸವರಾಜ ಸಿ.ಕಲ್ಯಾಣಶೆಟ್ಟರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net