ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮುಖ್ಯ

20ಟಿವಿಜಿP03
Published on

ತಾವರಗೇರಾ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಾಚಾರ್ಯ ಎಚ್.ಬಿ.ಜಗ್ಗಲ್ ಹೇಳಿದರು.

ಇಲ್ಲಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ವಿದ್ಯೆ ಜೊತೆಗೆ ಸಂಸ್ಕಾರ ಬಹಳ ಮುಖ್ಯ. ದುಡ್ಡು ಕೊಟ್ಟು ಪದವಿ ಪಡೆಯಬಹುದು. ಆದರೆ ಸಂಸ್ಕಾರವನ್ನು ದುಡ್ಡಿನಿಂದ ಕೊಂಡುಕೊಳ್ಳಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಅಂಕಗಳೊಂದಿಗೆ ಮಾನವಿಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲಿ. ಪಾಲಕರಿಗೆ ಹಾಗೂ ಗುರುಗಳಿಗೆ ಮೋಸ ಮಾಡಬಾರದು ಎಂದು ಹೇಳಿದರು.

ಪ್ರೋ.ಎನ್.ವಿ.ಪಾಟೀಲ ಉಪನ್ಯಾಸ ನೀಡಿದರು. ಉಪನ್ಯಾಸಕರಾದ ಬಿ.ಎನ್.ಪಾಟೀಲ್, ಕೆ.ಎಸ್ ಹೂಲಿ, ಶರೀಫ್ ಭಾವಿಕಟ್ಟಿ, ಮಲ್ಲಮ್ಮ ಪಾಟೀಲ್, ತಮ್ಮಣ್ಣ ಭಾವಿಕಟ್ಟಿ, ಸಿಬ್ಬಂದಿ ಗೋಪಾಲ ದಾಸರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net