ಕಾಂಗ್ರೆಸ್ ಕುರಿತ ಆರೋಪಗಳಿಗೆ ಸಾಕ್ಷ್ಯ ಇದೆಯಾ..? - ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ

Siddaramaiaha in Tavaragera
ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ.
Published on

ತಾವರಗೇರಾ: ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮಸ್ಕಿಗೆ ಪ್ರಚಾರಕ್ಕೆ ತೆರಳುವ ಮುನ್ನ ಸೋಮವಾರ ಪಟ್ಟಣದ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ ಹಾಗೂ ಷಡ್ಯಂತ್ರಗಳನ್ನು ಮಾಡುತ್ತಿದೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿ ಈ ಬಗ್ಗೆ ಬಿಜೆಪಿ ನಾಯಕರ ಬಳಿ ಸಾಕ್ಷ್ಯ ಇದೆಯಾ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸಮಸ್ಯೆಗಳು ಎದುರಾದಾಗ ಸುಳ್ಳು ಹೇಳುತ್ತಾರೆ. ಸಿಡಿ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಶಿಕ್ಷೆಯಾಗಬೇಕೆಂದರು ಒತ್ತಾಯಿಸಿದರು.

ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಪುರ, ರಾಘವೇಂದ್ರ ಹಿಟ್ನಾಳ, ಮಾಜಿ ಸಚಿವ ಬಸವರಾಜ ರಾಯರಡ್ಡಿ , ಎಂಎಲ್ಸಿ ಎಸ್.ಆರ್.ಪಾಟೀಲ್, ಮಾಜಿ ಶಾಸಕರಾದ ಹಸನಸಾಬ್ ದೋಟಿಹಾಳ, ಹಂಪನಗೌಡ ಬಾದರ್ಲಿ, ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net