

ತಾವರಗೇರಾ: ಸಮೀಪದ ಕಿಲ್ಲಾರಹಟ್ಟಿಯ ಸರ್ಕಾರಿ ಪ್ರೌಢಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಶಿಕ್ಷಕರು ಮಾಡುವ ಪಾಠಗಳನ್ನು ನೆನಪಿನಲ್ಲಿಟ್ಟುಕೊಂಡು ಸರಿಯಾಗಿ ಅಭ್ಯಾಸ ಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಬೇಕೆಂದು ವಿದ್ಯಾರ್ಥಿಗಳಿಗೆ ಬಿಇಒ ಸುರೇಂದ್ರ ಕಾಂಬಳೆ ಸಲಹೆ ನೀಡಿದರು.
ಹತ್ತನೇ ತರಗತಿ ವಿದ್ಯಾರ್ಥಿಗಳ ಜತೆಗೆ ಸಂವಾದ ಮಾಡಿ ಫಲಿತಾಂಶ ಸುಧಾರಣೆಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು. ಫಲಿತಾಂಶ ಸುಧಾರಣೆ ದಾಖಲೆಗಳನ್ನು ಪರಿಶೀಲಿಸಿ, ಉತ್ತಮ ಫಲಿತಾಂಶಕ್ಕೆ ಪ್ರಯತ್ನಿಸಲು ತಿಳಿಸಿದರು. ಕಿಲ್ಲಾರಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶರಣಗೌಡ ಪೋಲೀಸ ಪಾಟೀಲ, ಶಿಕ್ಷಣ ಇಲಾಖೆಯ ದಾವಲಸಾಬ ವಾಲೀಕಾರ, ಮುಖ್ಯಶಿಕ್ಷಕ ರಾಮೇಶ್ವರ ಡಾಣಿ ಹಾಗೂ ಗ್ರಾಪಂ ಸದಸ್ಯರು, ಶಿಕ್ಷಕರು, ಸಿಬ್ಬಂದಿ ಇದ್ದರು.