ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆ

PRATHIBHA KARANJI
ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುವ ತಾವರಗೇರಾ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕ ರವಿಚಂದ್ರ ಭಜಂತ್ರಿ ಇತರರಿದ್ದಾರೆ.
Published on

ತಾವರಗೇರಾ: ಕುಷ್ಟಗಿಯಲ್ಲಿ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ತಾವರಗೇರಾ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಯಶೋದಾ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ, ಭಾವಗೀತೆಯಲ್ಲಿ ಅಂಜಲಿ ಪ್ರಥಮ, ಜನಪದ ಗೀತೆಯಲ್ಲಿ ಪಲ್ಲವಿ ದ್ವಿತೀಯ, ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ದೀಕ್ಷಾ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿಕ್ಷಕ ರವಿಚಂದ್ರ ಭಜಂತ್ರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net