ಮಲೇರಿಯಾ ಗುಣಲಕ್ಷಣಗಳ ಬಗ್ಗೆ ಮಾಹಿತಿ

Untitled design (7)
ಲಿಂಗದಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಶಂಕ್ರಮ್ಮ, ವೈ.ಎಚ್. ಕಡೇಮನಿ, ಶ್ವೇತಾ, ಆನಂದ, ಲಕ್ಷ್ಮಮ್ಮ ಹಾಗೂ ವಿದ್ಯಾರ್ಥಿಗಳಿದ್ದರು.
Published on


ತಾವರಗೇರಾ: ತಾಲೂಕಿನ ಲಿಂಗದಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ಬುಧವಾರ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದವು.

ಹಿರಿಯ ಆರೋಗ್ಯ ಮೇಲ್ವಿಚಾರಕಿ ಶಂಕ್ರಮ್ಮ, ಮಲೇರಿಯಾ ರೋಗ ಹರಡುವ ಬಗೆ ಹಾಗೂ ಗುಣಲಕ್ಷಣಗಳ ಕುರಿತು ಮಾಹಿತಿ ಒದಗಿಸಿದರು. ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೈ.ಎಚ್. ಕಡೇಮನಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಸಿಬ್ಬಂದಿ ಆನಂದ, ಪಿಎಚ್‌ಸಿಒ ಶ್ವೇತಾ, ಆಶಾ ಕಾರ್ಯಕರ್ತೆ ಲಕ್ಷ್ಮಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net