ಕುಷ್ಠ ರೋಗ ಶಾಪವಲ್ಲ

Untitled design(29)
Published on

ತಾವರಗೇರಾ: ಸಮೀಪದ ನೀರಲೂಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೆಂಕಟೇಶ ಬಯ್ಯಪೂರ ಮಾತನಾಡಿ, ಕುಷ್ಠ ರೋಗ ಶಾಪವಲ್ಲ. ರೋಗದ ಬಗ್ಗೆ ಇರುವ ತಪ್ಪು ಕಲ್ಪನೆ ಯಿಂದ ಹೊರ ಬರಬೇಕಿದೆ ಎಂದು ತಿಳಿಸಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ ನಾಗಲೀಕರ ಮಾತನಾಡಿ, ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆದರೆ ಕುಷ್ಠರೋಗದಿಂದಾಗುವ ಅಂಗವೈಕಲ್ಯ ತಪ್ಪಿಸಲು ಸಾಧ್ಯ. ಕಾಯಿಲೆಗೆ ಉಚಿತ ಚಿಕಿತ್ಸೆ ಕೂಡ ಲಭ್ಯ ಎಂದು ತಿಳಿಸಿದರು.

ಆಂದೋಲನದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿ ಸದಸ್ಯರು, ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net